
ಹೂವಿನಹಡಗಲಿ: ತಾಲ್ಲೂಕಿನ ಕುರುವತ್ತಿ ಬಳಿ ಶನಿವಾರ ಗಣಿ ಮತ್ತು ಭೂ ವಿಜ್ಞಾನ ಅಧಿಕಾರಿಗಳು ದಾಳಿ ನಡೆಸಿ, ತುಂಗಭದ್ರಾ ನದಿ ತೀರದಲ್ಲಿ ಅಕ್ರಮವಾಗಿ ದಾಸ್ತಾನು ಮಾಡಿದ್ದ ಮರಳನ್ನು ವಶಪಡಿಸಿಕೊಂಡಿದ್ದಾರೆ.
ದಂಧೆಕೋರರು ನದಿ ತೀರದಲ್ಲಿ ಮರಳನ್ನು ಅಕ್ರಮವಾಗಿ ಸಂಗ್ರಹಿಸಿ ಮಾರಾಟಕ್ಕೆ ಕಳಿಸುತ್ತಿದ್ದ ಮಾಹಿತಿ ಆಧರಿಸಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಲ್ಲಿ ಸಂಗ್ರಹವಿದ್ದ ಮರಳನ್ನು ಮೈಲಾರ ಪ್ರವಾಸಿ ಮಂದಿರ ಆವರಣಕ್ಕೆ ಸಾಗಣೆ ಮಾಡಿ ಲೋಕೋಪಯೋಗಿ ಇಲಾಖೆಗೆ ಹಸ್ತಾಂತರಿಸಿದ್ದಾರೆ.
ದಂಧೆಕೋರರು ಮರಳು ಸಾಗಣೆಗಾಗಿ ನದಿ ಪಾತ್ರದಲ್ಲಿ ಅನಧಿಕೃತವಾಗಿ ರಸ್ತೆ ನಿರ್ಮಿಸಿಕೊಂಡಿರುವುದನ್ನು ಪತ್ತೆ ಹಚ್ಚಿದ ಅಧಿಕಾರಿಗಳು ಜೆಸಿಬಿ ಯಂತ್ರದಿಂದ ಕಂದಕ ತೋಡಿ ರಸ್ತೆಯನ್ನು ನಾಶಪಡಿಸಿದ್ದಾರೆ.
ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ಭೂ ವಿಜ್ಞಾನಿ ಚಾಲಿತ ದಳದ ಕೀರ್ತಿ ಕುಮಾರ, ಭೂ ವಿಜ್ಞಾನಿ ಮಲ್ಲಯ್ಯ ಹಾಗೂ ಸಿಬ್ಬಂದಿ ದಾಳಿ ನಡೆಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.