ಬಳ್ಳಾರಿ: ನಗರದ ಹೊರ ವಲಯದ ಮುಂಡ್ರಿಗಿ ಕೈಗಾರಿಕಾ ಪ್ರದೇಶದ ಗೋದಾಮೊಂದರಲ್ಲಿ ಅಕ್ರಮವಾಗಿ ಸಂಗ್ರಹಿಸಿಡಲಾಗಿದ್ದ ಪಡಿತರ ಅಕ್ಕಿ, ಗೋಧಿ ಮತ್ತು ಜೋಳವನ್ನು ಗ್ರಾಮಾಂತರ ಠಾಣೆ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಬಳ್ಳಾರಿ ತಾಲ್ಲೂಕು ಆಹಾರ ನಿರೀಕ್ಷಕ ಆದಿಶೇಷ ಅಂಬೇಡ್ಕರ್ ಎಂಬುವವರು ನೀಡಿದ ದೂರು ಆಧರಿಸಿ ಇಲಿಯಾಸ್ ಭಾಷಾ ಎಂಬುವವರ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.
ಪೊಲೀಸರು ಮತ್ತು ಆಹಾರ ಇಲಾಖೆ ಅಧಿಕಾರಿಗಳು ಜಂಟಿಯಾಗಿ ನಡೆಸಿದ ದಾಳಿಯ ವೇಳೆ 40 ಕೆ.ಜಿಯ 171 ಚೀಲ ಅಕ್ಕಿ, 40 ಕೆ.ಜಿಯ 52 ಚೀಲ ಗೋಧಿ, 40 ಕೆ.ಜಿಯ 16 ಚೀಲ ಜೋಳವನ್ನು ವಶಪಡಿಸಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.