ADVERTISEMENT

ಬಳ್ಳಾರಿ | ಸಂವಿಧಾನದಿಂದ ಸರ್ವರಿಗೂ ಸಮಾನತೆ: ಸಚಿವ ರಹೀಂ ಖಾನ್

ಗಣರಾಜ್ಯೋತ್ಸವ ಅಂಗವಾಗಿ ಧ್ವಜಾರೋಹಣ ನೆರವೇರಿಸಿ ಸಚಿವ ರಹೀಂ ಖಾನ್ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 27 ಜನವರಿ 2026, 5:05 IST
Last Updated 27 ಜನವರಿ 2026, 5:05 IST
<div class="paragraphs"><p>ಬಳ್ಳಾರಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಕೇಂದ್ರದಲ್ಲಿ ಸೋಮವಾರ ಗಣರಾಜ್ಯೋತ್ಸವ ನಿಮಿತ್ತ ಧ್ವಜಾರೋಹಣ ನೆರವೇರಿಸಿದ ಸಚಿವ ರಹೀಂ ಖಾನ್‌ ಗೌರವ ವಂದನೆ ಸಲ್ಲಿಸಿದರು.</p></div>

ಬಳ್ಳಾರಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಕೇಂದ್ರದಲ್ಲಿ ಸೋಮವಾರ ಗಣರಾಜ್ಯೋತ್ಸವ ನಿಮಿತ್ತ ಧ್ವಜಾರೋಹಣ ನೆರವೇರಿಸಿದ ಸಚಿವ ರಹೀಂ ಖಾನ್‌ ಗೌರವ ವಂದನೆ ಸಲ್ಲಿಸಿದರು.

   

ಬಳ್ಳಾರಿ: ‘ಡಾ.ಬಿ.ಆರ್ ಅಂಬೇಡ್ಕರ್ ರಚಿಸಿದ ಸಂವಿಧಾನದಿಂದ ದೇಶದಲ್ಲಿ ಸರ್ವರಿಗೂ ಸಮಾನತೆ ಲಭಿಸಿದೆ’ ಎಂದು ಪೌರಾಡಳಿತ ಮತ್ತು ಹಜ್ ಸಚಿವ ರಹೀಂ ಖಾನ್ ಅವರು ಹೇಳಿದರು.

ಜಿಲ್ಲಾಡಳಿತ ವತಿಯಿಂದ ನಗರದ ಬಿಎಂಸಿಆರ್‌ಸಿ ಮೈದಾನದಲ್ಲಿ ಸೋಮವಾರ ಏರ್ಪಡಿಸಿದ್ದ 77ನೇ ಗಣರಾಜ್ಯೋತ್ಸವದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. 

ADVERTISEMENT

‘ಸಂವಿಧಾನ ಜಾರಿಗೆ ಬಂದ ನಂತರ ಪ್ರತಿಯೊಬ್ಬರಿಗೂ ಸಮಾನ ಅವಕಾಶ ಸಿಕ್ಕಿದೆ. ದೇಶ ಆಳುವ, ನಾಯಕನಾಗುವ ಅವಕಾಶ ಸಿಕ್ಕಿದೆ. ಶಿಕ್ಷಣದಿಂದ ಉನ್ನತ ಹುದ್ದೆಗಳನ್ನು ಅಲಂಕರಿಸುವ ಅವಕಾಶವನ್ನು ಸಂವಿಧಾನ ನೀಡಿದೆ’ ಎಂದರು.

ನಗರಗಳ ಸಮಗ್ರ ಅಭಿವೃದ್ಧಿಗೆ ರಾಜ್ಯ ಸರ್ಕಾರ ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ, ಮಹಾತ್ಮಾ ಗಾಂಧಿ ನಗರ ವಿಕಾಸ ಯೋಜನೆ, ಸ್ವಚ್ಛ ಭಾರತ್ ಮಿಷನ್, ಅಮೃತ 2.0 ಯೋಜನೆ ತರಲಾಗಿದೆ. ಹಲವಾರು ವರ್ಷಗಳಿಂದ ದಾಖಲೆಗಳಿಲ್ಲದ ಜಾಗಗಳಿಗೆ ಖಾತಾ ವಿತರಿಸಲಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಪೊಲೀಸ್, ಅರಣ್ಯ ಇಲಾಖೆ, ಗೃಹರಕ್ಷಕ ದಳಗಳಿಂದ ಪಥಸಂಚಲನ ನಡೆಯಿತು. ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳ ಸಾಧಕರನ್ನು ಸನ್ಮಾನಿಸಲಾಯಿತು.

ಇದಕ್ಕೂ ಮೊದಲು ಸಚಿವ ರಹೀಂ ಖಾನ್ ನಗರದ ಎಚ್‌.ಆರ್ ಗವಿಯಪ್ಪ ವೃತ್ತದಲ್ಲಿ ಧ್ವಜಾರೋಹಣ ನೆರವೇರಿಸಿದರು. ಬಳಿಕ ಬಿಎಂಸಿಆರ್‌ಸಿ ಬಳಿಯ ಮಹಾತ್ಮಗಾಂಧೀಜಿ ಪ್ರತಿಮೆಗೆ ಗೌರವ ನಮನ ಸಲ್ಲಿಸಿದರು. 

ಸಂಸದ ಈ.ತುಕಾರಾಮ್, ಲಿಡ್ಕರ್‌ ಅಧ್ಯಕ್ಷ ಮುಂಡರಗಿ ನಾಗರಾಜ, ಮೇಯರ್‌ ಪಿ.ಗಾದೆಪ್ಪ, ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜೆ.ಎಸ್.ಆಂಜನೇಯುಲು, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ.ಚಿದಾನಂದಪ್ಪ, ಜಿಲ್ಲಾ ಮಟ್ಟದ ಎಲ್ಲ ಅಧಿಕಾರಿಗಳು ಇದ್ದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.