ADVERTISEMENT

ಕೊಟ್ಟೂರಿನಲ್ಲಿ ಆರಂಭವಾಗಲಿರುವ ಇಂದಿರಾ ಕ್ಯಾಂಟೀನ್

​ಪ್ರಜಾವಾಣಿ ವಾರ್ತೆ
Published 31 ಮೇ 2024, 13:34 IST
Last Updated 31 ಮೇ 2024, 13:34 IST
31ಕೆಟಿಆರ್ ಇಪಿ1 - ಕೊಟ್ಟೂರಿನ ಸಮುದಾಯ ಆರೋಗ್ಯ ಕೇಂದ್ರದ ಆವರಣದಲ್ಲಿ ನಿರ್ಮಾಣಗೊಳ್ಳುತ್ತಿರುವ ಇಂದಿರಾ ಕ್ಯಾಂಟೀನ್ ಕಟ್ಟಡ.
31ಕೆಟಿಆರ್ ಇಪಿ1 - ಕೊಟ್ಟೂರಿನ ಸಮುದಾಯ ಆರೋಗ್ಯ ಕೇಂದ್ರದ ಆವರಣದಲ್ಲಿ ನಿರ್ಮಾಣಗೊಳ್ಳುತ್ತಿರುವ ಇಂದಿರಾ ಕ್ಯಾಂಟೀನ್ ಕಟ್ಟಡ.   

ಕೊಟ್ಟೂರು: ಕಡಿಮೆ ದರದಲ್ಲಿ ಉಪಹಾರ ಹಾಗೂ ಊಟ ನೀಡಿ ಬಡ ಜನತೆಯ ಹಸಿವು ನೀಗಿಸುವ ಸರ್ಕಾರದ ಮಹತ್ವಾಕಾಂಕ್ಷೆಯ ಇಂದಿರಾ ಕ್ಯಾಂಟೀನ್ ಪಟ್ಟಣದಲ್ಲಿ ಶೀಘ್ರದಲ್ಲಿಯೇ ಕಾರ್ಯಾರಂಭ ಮಾಡಲಿದೆ.

ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದ ಆವರಣದಲ್ಲಿ ನಿರ್ಮಾಣಗೊಳ್ಳುತ್ತಿರುವ ಇಂದಿರಾ ಕ್ಯಾಂಟೀನ್ ತಾಲ್ಲೂಕಿನ ಜನತೆಯ ಬಹು ವರ್ಷಗಳ ಬೇಡಿಕೆ ಈಡೇರುತ್ತಿದೆ.

ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದ್ದಾಗ ರಾಜ್ಯದಾದ್ಯಂತ ಜಿಲ್ಲಾ ಹಾಗೂ ತಾಲ್ಲೂಕು ಕೇಂದ್ರಗಳಲ್ಲಿ ಇಂದಿರಾ ಕ್ಯಾಂಟೀನ್ ಆರಂಭಕ್ಕೆ ಮುಂದಾಗಿತ್ತು, ನಂತರ ರಾಜ್ಯದಲ್ಲಿ ಬಿಜೆಪಿ ಪಕ್ಷ ಅಧಿಕಾರಕ್ಕೆ ಬಂದ ನಂತರ ಹೊಸದಾಗಿ ಇಂದಿರಾ ಕ್ಯಾಂಟೀನ್ ಆರಂಭಿಸಿರಲಿಲ್ಲ. ಇದೀಗ ರಾಜ್ಯದಲ್ಲಿ ಪುನಃ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಪಕ್ಷ ಕ್ಯಾಂಟೀನ್ ಇಲ್ಲದ ಕಡೆ ಆರಂಭಕ್ಕೆ ಮುಂದಾಗಿದೆ.

ADVERTISEMENT

ನಿರ್ಮಾಣದ ಟೆಂಡರ್ ಪಡೆದ ಖಾಸಗಿ ಕಂಪನಿಯವರು, ಸಿದ್ದಪಡಿಸಿದ ಕಟ್ಟಡದ ಬಿಡಿ ಭಾಗಗಳನ್ನು ಬೃಹತ್ ಯಂತ್ರಗಳ ಮೂಲಕ ಜೋಡಿಸುವ ಕಾರ್ಯ ನಡೆದಿದ್ದು ಕಟ್ಟಡದ ಮುಂಭಾಗದಲ್ಲಿ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಭಾವಚಿತ್ರವಿರುವ ಕ್ಯಾಂಟೀನ್ ಕಟ್ಟಡ ಬಹುತೇಕ ಮುಕ್ತಾಯ ಹಂತ ತಲುಪಿದ್ದು ಲೋಕಸಭಾ ಚುನಾವಣೆ ನೀತಿ ಸಂಹಿತೆ ಮುಗಿಯುತ್ತಿದ್ದಂತೆ ಆರಂಭವಾಗಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.