ADVERTISEMENT

ಕಾಂಗ್ರೆಸ್‌ನಿಂದ ಇಂದಿರಾ ಗಾಂಧಿ ಪುಣ್ಯಸ್ಮರಣೆ

​ಪ್ರಜಾವಾಣಿ ವಾರ್ತೆ
Published 31 ಅಕ್ಟೋಬರ್ 2022, 13:24 IST
Last Updated 31 ಅಕ್ಟೋಬರ್ 2022, 13:24 IST
ಹೊಸಪೇಟೆಯ ಕಾಂಗ್ರೆಸ್‌ ಕಚೇರಿಯಲ್ಲಿ ಸೋಮವಾರ ಇಂದಿರಾ ಗಾಂಧಿ, ಸರ್ದಾರ್‌ ವಲ್ಲಭಭಾಯಿ ಪಟೇಲ್‌ ಅವರಿಗೆ ಪಕ್ಷದ ಮುಖಂಡರು ಗೌರವ ಸಲ್ಲಿಸಿದರು
ಹೊಸಪೇಟೆಯ ಕಾಂಗ್ರೆಸ್‌ ಕಚೇರಿಯಲ್ಲಿ ಸೋಮವಾರ ಇಂದಿರಾ ಗಾಂಧಿ, ಸರ್ದಾರ್‌ ವಲ್ಲಭಭಾಯಿ ಪಟೇಲ್‌ ಅವರಿಗೆ ಪಕ್ಷದ ಮುಖಂಡರು ಗೌರವ ಸಲ್ಲಿಸಿದರು   

ಹೊಸಪೇಟೆ (ವಿಜಯನಗರ): ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಪುಣ್ಯಸ್ಮರಣೆ ಹಾಗೂ ಮಾಜಿ ಗೃಹಸಚಿವ ಸರ್ದಾರ್‌ ವಲ್ಲಭಭಾಯಿ ಪಟೇಲ್‌ ಅವರ ಜಯಂತಿ ನಗರದ ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ಆಚರಿಸಲಾಯಿತು.

ಪಕ್ಷದ ಗ್ರಾಮೀಣ ಜಿಲ್ಲಾಧ್ಯಕ್ಷ ಬಿ.ವಿ.ಶಿವಯೋಗಿ ಮಾತನಾಡಿ, ಇಂದಿರಾ ಗಾಂಧಿಯವರು ದೇಶಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಉಳುವವನೇ ಭೂಮಿಯ ಒಡೆಯ, ಬ್ಯಾಂಕ್‍ಗಳ ರಾಷ್ಟ್ರೀಕರಣ ಇಂದಿರಾ ಗಾಂಧಿಯವರು ದೇಶಕ್ಕೆ ಕೊಟ್ಟಿರುವ ಪ್ರಮುಖ ಕೊಡುಗೆಗಳು. ದೇಶದ ಎಲ್ಲ ವರ್ಗದವರ ಅಭಿವೃದ್ಧಿಗೆ ಶ್ರಮಿಸಿದ್ದರು ಎಂದರು.

ಎಐಸಿಸಿ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಅವರು ಆಯ್ಕೆಯಾಗಿರುವುದು ಖುಷಿ ತಂದಿದೆ. ರಾಜ್ಯಕ್ಕೆ ಇದು ಹೆಮ್ಮೆ ಪಡುವ ವಿಷಯ. ಬೆಂಗಳೂರಿನಲ್ಲಿ ಖರ್ಗೆ ಸ್ವಾಗತ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಎರಡೂ ಜಿಲ್ಲೆಗಳಿಂದ ಅಪಾರ ಸಂಖ್ಯೆಯ ಕಾರ್ಯಕರ್ತರು ತೆರಳಲಿದ್ದಾರೆ ಎಂದು ತಿಳಿಸಿದರು.

ADVERTISEMENT

ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ವಿನಯ್ ಶೆಟ್ಟರ್, ಖಾಜಾ ಹುಸೇನ್, ಮುಖಂಡರಾದ ರಾಜಶೇಖರ್ ಹಿಟ್ನಾಳ್, ಗುಜ್ಜಲ್ ರಘು, ಗುಜ್ಜಲ್ ನಾಗರಾಜ್, ಕೆ.ಶಮಿಮೂರ್ತಿ, ನಿಂಬಗಲ್ ರಾಮಕೃಷ್ಣ, ಸಿ.ಆರ್.ಭರತ್ ಕುಮಾರ್, ಪಾಂಡು, ಮಂಜುನಾಥ, ವಿಜಯಕುಮಾರ್, ಹನುಮಂತಪ್ಪ, ವಿಜಯಕುಮಾರ್, ನಬಿಸಾಬ್, ಎಚ್.ಬಿ.ಶ್ರೀನಿವಾಸ್, ಬಿ.ಗಣೇಶ್, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಶಾಹೀರಾ ಬಾನು, ಸೇವಾ ದಳದ ಜಿಲ್ಲಾಧ್ಯಕ್ಷ ಬಿ.ಮಾರೆಣ್ಣ, ಯೋಗಲಕ್ಷ್ಮಿ, ಅನಿತಾ ಶ್ರೀಕಾಂತ್, ನೇತ್ರಾ, ಕವಿತಾ, ರಾಧ, ಬಾನುಬೀ ಇತರರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.