ADVERTISEMENT

ಹೊಸಪೇಟೆ: ವಿಮೆ ಕಂಪನಿ ಖಾಸಗೀಕರಣಕ್ಕೆ ವಿರೋಧ

​ಪ್ರಜಾವಾಣಿ ವಾರ್ತೆ
Published 4 ಆಗಸ್ಟ್ 2021, 13:56 IST
Last Updated 4 ಆಗಸ್ಟ್ 2021, 13:56 IST
ವಿಮೆ ಕಂಪನಿ ನೌಕರರು ಬುಧವಾರ ಹೊಸಪೇಟೆಯಲ್ಲಿ ಪ್ರತಿಭಟನೆ ನಡೆಸಿದರು
ವಿಮೆ ಕಂಪನಿ ನೌಕರರು ಬುಧವಾರ ಹೊಸಪೇಟೆಯಲ್ಲಿ ಪ್ರತಿಭಟನೆ ನಡೆಸಿದರು   

ಹೊಸಪೇಟೆ (ವಿಜಯನಗರ): ಕೇಂದ್ರ ಸರ್ಕಾರವು ವಿಮೆ ಕಂಪನಿಗಳನ್ನು ಖಾಸಗೀಕರಣಗೊಳಿಸುತ್ತಿರುವುದನ್ನು ವಿರೋಧಿಸಿ ವಿವಿಧ ವಿಮೆ ಕಂಪನಿಗಳ ನೌಕರರು ಬುಧವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.

ನಗರದ ಯುನೈಟೆಡ್ ಇಂಡಿಯಾ ಡಿವಿಷನಲ್‌ ಕಚೇರಿ ಎದುರು ಸೇರಿದ ನೌಕರರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.

ಯುನೈಟೆಡ್‌ ಇಂಡಿಯಾ ಅಶ್ಯುರೆನ್ಸ್‌, ಓರಿಯಂಟಲ್‌ ಇನ್‌ಶೂರೆನ್ಸ್‌, ನ್ಯೂ ಇಂಡಿಯಾ ಅಶ್ಯುರೆನ್ಸ್‌, ನ್ಯಾಷನಲ್‌ ಇನ್‌ಶೂರೆನ್ಸ್‌ ಕಂಪನಿಗಳ ನೌಕರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಕೇಂದ್ರ ಸರ್ಕಾರ ತನ್ನ ನಿರ್ಧಾರದಿಂದ ಹಿಂದೆ ಸರಿಯದಿದ್ದರೆ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.