ವರ್ತಿಕಾ ಕಟಿಯಾರ್
ಬಳ್ಳಾರಿ: ಬಳ್ಳಾರಿ ವಲಯ ಪೊಲೀಸ್ ಉಪ ಮಹಾ ನಿರೀಕ್ಷಕರನ್ನಾಗಿ (ಡಿಐಜಿ) ವರ್ತಿಕಾ ಕಟಿಯಾರ್ ಅವರನ್ನು ನಿಯೋಜಿಸಿ ಸರ್ಕಾರ ಆದೇಶಿಸಿದೆ.
ವರ್ತಿಕಾ ಕಟಿಯಾರ್ ಅವರು 2010ನೇ ಬ್ಯಾಚ್‌ನ ಐಪಿಎಸ್ ಅಧಿಕಾರಿ. ಸದ್ಯ ಅವರು ರಾಜ್ಯ ಗೃಹರಕ್ಷಕ ಮತ್ತು ಪೌರ ರಕ್ಷಣಾ ದಳದ ಡಿಐಜಿ ಹುದ್ದೆಯಲ್ಲಿದ್ದರು.
ಈ ಹಿಂದೆ ಬಳ್ಳಾರಿ ವಲಯ ಪೊಲೀಸ್ ಮಹಾನಿರೀಕ್ಷಕರಾಗಿದ್ದ ಬಿ.ಎಸ್.ಲೋಕೇಶ್ ಏಪ್ರಿಲ್ 30ರಂದು ನಿವೃತ್ತರಾಗಿದ್ದರು. ಅಂದಿನಿಂದಲೂ ಖಾಲಿ ಉಳಿದಿದ್ದ ಸ್ಥಾನಕ್ಕೆ ವರ್ತಿಕಾ ಅವರನ್ನು ವರ್ಗಾಯಿಸಲಾಗಿದೆ.
ಬಳ್ಳಾರಿ ವಲಯಕ್ಕೆ ಬಳ್ಳಾರಿ, ವಿಜಯನಗರ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳು ಸೇರುತ್ತವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.