ADVERTISEMENT

ಸಂಭ್ರಮದ ಜಂಬುನಾಥಸ್ವಾಮಿ ರಥೋತ್ಸವ

​ಪ್ರಜಾವಾಣಿ ವಾರ್ತೆ
Published 17 ಏಪ್ರಿಲ್ 2019, 14:17 IST
Last Updated 17 ಏಪ್ರಿಲ್ 2019, 14:17 IST
ಜಂಬುನಾಥಹಳ್ಳಿಯಲ್ಲಿ ಬುಧವಾರ ಸಂಜೆ ಜಂಬುನಾಥಸ್ವಾಮಿ ರಥೋತ್ಸವ ಶ್ರದ್ಧಾ, ಭಕ್ತಿಯಿಂದ ನಡೆಯಿತು–ಪ್ರಜಾವಾಣಿ ಚಿತ್ರ
ಜಂಬುನಾಥಹಳ್ಳಿಯಲ್ಲಿ ಬುಧವಾರ ಸಂಜೆ ಜಂಬುನಾಥಸ್ವಾಮಿ ರಥೋತ್ಸವ ಶ್ರದ್ಧಾ, ಭಕ್ತಿಯಿಂದ ನಡೆಯಿತು–ಪ್ರಜಾವಾಣಿ ಚಿತ್ರ   

ಹೊಸಪೇಟೆ: ಜಂಬುನಾಥ ಸ್ವಾಮಿ ರಥೋತ್ಸವ ಬುಧವಾರ ಸಂಜೆ ಶ್ರದ್ಧಾ. ಭಕ್ತಿ ಹಾಗೂ ಸಡಗರ, ಸಂಭ್ರಮದಿಂದ ನಗರದ ಹೊರವಲಯದ ಜಂಬುನಾಥಹಳ್ಳಿಯಲ್ಲಿ ನಡೆಯಿತು.

ವಿವಿಧ ಕಡೆಗಳಿಂದ ಬಂದಿದ್ದ ಭಕ್ತರು ತೇರು ಎಳೆದರು. ಸ್ವಾಮಿಯ ತೇರು ಮುಂದೆ ಸಾಗುತ್ತಿದ್ದಂತೆ ಅಲ್ಲಿದ್ದ ಭಕ್ತರು ಬಾಳೆಹಣ್ಣು, ಉತ್ತತ್ತಿ, ಹೂ ಎಸೆದು ಭಕ್ತಿ ಸಮರ್ಪಿಸಿದರು. ದೇವಸ್ಥಾನದಿಂದ ಸ್ವಲ್ಪ ದೂರದ ವರೆಗೆ ಸಾಗಿದ ತೇರು ಪುನಃ ಮೂಲ ಸ್ಥಾನ ತಲುಪಿತು. ಈ ವೇಳೆ ಭಕ್ತರ ಜಯಘೋಷ ಮುಗಿಲು ಮುಟ್ಟಿತ್ತು.

ಬೆಳಿಗ್ಗೆ ಜಂಬುನಾಥಸ್ವಾಮಿಗೆ ವಿಶೇಷ ರೀತಿಯಲ್ಲಿ ಅಲಂಕರಿಸಿ ಪೂಜಿಸಲಾಯಿತು. ನಗರ ಹಾಗೂ ಗ್ರಾಮೀಣ ಭಾಗದಿಂದ ಅಪಾರ ಸಂಖ್ಯೆಯಲ್ಲಿ ಬಂದಿದ್ದ ಭಕ್ತರು ಸರತಿ ಸಾಲಿನಲ್ಲಿ ನಿಂತು ದರ್ಶನ ಪಡೆದರು. ಬೆಳಿಗ್ಗೆಯಿಂದ ರಾತ್ರಿ ವರೆಗೆ ದೇಗುಲದ ಪರಿಸರದಲ್ಲಿ ಹಬ್ಬದ ವಾತಾವರಣ ಕಂಡು ಬಂತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.