ಬಳ್ಳಾರಿ: ‘ಮೂರನೇ ಹಂತದ ಬಿಜೆಪಿ ಜನಾಕ್ರೋಶ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಗುರುವಾರ ಬಳ್ಳಾರಿ ಮತ್ತು ವಿಜಯನಗರದಲ್ಲಿ ಹಾಗೂ ಶುಕ್ರವಾರ ಚಿತ್ರದುರ್ಗದಲ್ಲಿ ಯಾತ್ರೆ ನಡೆಯಬೇಕಿತ್ತು.
ಆದರೆ, ಜಮ್ಮು ಕಾಶ್ಮೀರದಲ್ಲಿ ಕನ್ನಡಿಗರು ಸೇರಿ ದೇಶದ 28 ಮಂದಿ ಹತರಾಗಿದ್ದಾರೆ. ಸಂತಾಪ ಸೂಚನೆ ಹಿನ್ನೆಲೆಯಲ್ಲಿ ಯಾತ್ರೆಯನ್ನು ಮುಂದೂಡಲಾಗಿದೆ’ ಎಂದು ವಿಧಾನಪರಿಷತ್ ವಿರೋಧ ಪಕ್ಷದ ಮುಖ್ಯಸಚೇತಕ ಹಾಗೂ ಯಾತ್ರೆಯ ಸಂಚಾಲಕ ಎನ್. ರವಿಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.