ADVERTISEMENT

ಜನನಿ ಮಹಿಳಾ ಸಬಲೀಕರಣ ಸಮಿತಿಯ ಪ್ರಥಮ ವಾರ್ಷಿಕೋತ್ಸವ

​ಪ್ರಜಾವಾಣಿ ವಾರ್ತೆ
Published 17 ಅಕ್ಟೋಬರ್ 2021, 12:44 IST
Last Updated 17 ಅಕ್ಟೋಬರ್ 2021, 12:44 IST
ಜನನಿ ಮಹಿಳಾ ಸಬಲೀಕರಣ ಸಮಿತಿ ಪ್ರಥಮ ವಾರ್ಷಿಕೋತ್ಸವದ ನಿಮಿತ್ತ ಏರ್ಪಡಿಸಿದ್ದ ಶಿಬಿರದಲ್ಲಿ ಬಿಜೆಪಿ ಯುವ ಮುಖಂಡ ಸಂದೀಪ್‌ ಸಿಂಗ್‌ ರಕ್ತದಾನ ಮಾಡಿದರು
ಜನನಿ ಮಹಿಳಾ ಸಬಲೀಕರಣ ಸಮಿತಿ ಪ್ರಥಮ ವಾರ್ಷಿಕೋತ್ಸವದ ನಿಮಿತ್ತ ಏರ್ಪಡಿಸಿದ್ದ ಶಿಬಿರದಲ್ಲಿ ಬಿಜೆಪಿ ಯುವ ಮುಖಂಡ ಸಂದೀಪ್‌ ಸಿಂಗ್‌ ರಕ್ತದಾನ ಮಾಡಿದರು   

ಹೊಸಪೇಟೆ(ವಿಜಯನಗರ): ‘ಹೆರಿಗೆ ಸಮಯದಲ್ಲಿ ಗರ್ಭಿಣಿಯರಿಗೆ ರಕ್ತದ ಅವಶ್ಯಕತೆ ಹೆಚ್ಚಿರುತ್ತದೆ. ಹೆಚ್ಚು ರಕ್ತದಾನದಿಂದ ಅವರಿಗೆ ನೆರವು ಸಿಕ್ಕಂತಾಗುತ್ತದೆ’ ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸಿಂಧೂ ಯಲಿಗಾರ್ ಹೇಳಿದರು.

ನಗರದ ರೋಟರಿ ಸಭಾಂಗಣದಲ್ಲಿ ಭಾನುವಾರ ಆಯೋಜಿಸಿದ್ದ ಜನನಿ ಮಹಿಳಾ ಸಬಲೀಕರಣ ಸಮಿತಿಯ ಪ್ರಥಮ ವಾರ್ಷಿಕೋತ್ಸವ ಸಮಾರಂಭ ಹಾಗೂ ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿದರು.

‘ರಕ್ತದಾನ ಶ್ರೇಷ್ಠ ಕಾರ್ಯವಾಗಿದೆ. ಪ್ರತಿಯೊಬ್ಬ ಆರೋಗ್ಯವಂತ ವ್ಯಕ್ತಿ ರಕ್ತದಾನ ಮಾಡಬಹುದು. ಸಂಸ್ಥೆಯ ವಾರ್ಷಿಕೋತ್ಸವವನ್ನು ಕೇವಲ ಮನರಂಜನೆ ಕಾರ್ಯಕ್ರಮಗಳಿಗೆ ಮೀಸಲಿಡದೆ ರಕ್ತದಾನ ಶಿಬಿರ ಆಯೋಜಿಸಿ ಅರ್ಥಪೂರ್ಣವಾಗಿ ಆಚರಿಸುತ್ತಿರುವುದು ಸಂತಸದ ಸಂಗತಿ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ADVERTISEMENT

ವೈದ್ಯೆ ಡಾ.ಸುಲೋಚನಾ ಮಾತನಾಡಿ. ‘ಕಳೆದ ಒಂದು ವರ್ಷದಲ್ಲಿ ಜನನಿ ಸಂಸ್ಥೆ ಅನೇಕ ಸಮಾಜಮುಖಿ ಕಾರ್ಯಗಳನ್ನು ಮಾಡುತ್ತಾ ಬಂದಿದೆ. ಅವುಗಳು ನಿರಂತರವಾಗಿ ನಡೆಯುತ್ತಿರಬೇಕು’ ಎಂದರು.

ಜನನಿ ಸಮಿತಿಯ ನೂತನ ಅಧ್ಯಕ್ಷೆಯಾಗಿ ಗೀತಾಶಂಕರ್ ಅವರನ್ನು ಆಯ್ಕೆ ಮಾಡಲಾಯಿತು. 15 ಜನ ಮಹಿಳೆಯರು ಸದಸ್ಯತ್ವ ಸ್ವೀಕರಿಸಿದರು.

ಜಿತೋ ಸಂಸ್ಥೆಯ ಮಹಿಳಾ ಶಾಖಾ ಅಧ್ಯಕ್ಷೆ ಕಾಂಚನ್ ಕವಾಡ್, ಆಯುಷ್ ವೈದ್ಯಾಧಿಕಾರಿ ಡಾ. ಆರತಿ ಸಿ ಹಿರೇಮಠ್, ಜನನಿ ಸಮಿತಿಯ ನಿಕಟಪೂರ್ವ ಅಧ್ಯಕ್ಷೆ ನಾಗವೇಣಿ, ಪ್ರಧಾನ ಕಾರ್ಯದರ್ಶಿ ಹುಲಿಗೆಮ್ಮ, ಕಾರ್ಯದರ್ಶಿ ರಾಜೇಶ್ವರಿ, ಕಾರ್ಯಕಾರಿಣಿ ಸದಸ್ಯರಾದ ಮುಮ್ತಾಜ್ ಮತ್ತು ಶಂಶಾದ್ ಇದ್ದರು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.