ಜೆಇಇ
ಬಳ್ಳಾರಿ: ಮೇ 26ರಂದು ನಗರದಲ್ಲಿ ಜೆಇಇ ಪರೀಕ್ಷೆ ನಡೆಯಲಿರುವ ಎರಡು ಕೇಂದ್ರಗಳ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ನಗರದ ಬಿಐಟಿಎಂ ಕಾಲೇಜು ಮತ್ತು ಕಿಷ್ಕಿಂದ ವಿಶ್ವವಿದ್ಯಾಲಯದಲ್ಲಿ ಬೆಳಿಗ್ಗೆ 9ರಿಂದ ಮಧ್ಯಾಹ್ನ 12ರ ವರೆಗೆ ಹಾಗೂ ಮಧ್ಯಾಹ್ನ 2.30ರಿಂದ ಸಂಜೆ 5.30 ರವರೆಗೆ ಪರೀಕ್ಷೆಗಳು ನಡೆಯಲಿವೆ. ಈ ಕೇಂದ್ರಗಳ ಸುತ್ತಲ 200 ಮೀಟರ್ ಪ್ರದೇಶದಲ್ಲಿ ಅನಧೀಕೃತ ವ್ಯಕ್ತಿ ಮತ್ತು ಗುಂಪುಗಳಿಗೆ ಪ್ರವೇಶ ಇರುವುದಿಲ್ಲ. ಬೆಳಿಗ್ಗೆ 8ರಿಂದ ಸಂಜೆ 6ರ ವರೆಗೆ ಝೆರಾಕ್ಸ್ ಅಂಗಡಿಗಳನ್ನು ತಾತ್ಕಾಲಿಕವಾಗಿ ಮುಚ್ಚುವಂತೆ ಆದೇಶದಲ್ಲಿ ತಿಳಿಸಲಾಗಿದೆ.
ವಿಶ್ವ ಸ್ಕಿಜೋಫ್ರೇನಿಯ ದಿನಾಚರಣೆ: ಜಾಗೃತಿ ಜಾಥಾ
ಬಳ್ಳಾರಿ: ‘ವಿಶ್ವ ಸ್ಕಿಜೋಫ್ರೇನಿಯ ದಿನಾಚರಣೆ’ ಅಂಗವಾಗಿ ಮೇ 24 ರಂದು ಬೆಳಿಗ್ಗೆ 9 ಗಂಟೆಗೆ ನಗರದ ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ ಆವರಣದಿಂದ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿದೆ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ವಿಭಾಗದ ಆಶ್ರಯದಲ್ಲಿ ಜಾಥಾ ನಡೆಯುತ್ತಿದೆ.
ತೋಟಗಾರಿಕೆ ತರಬೇತಿ: ಅರ್ಜಿ ಆಹ್ವಾನ
ಬಳ್ಳಾರಿ: ತೋಟಗಾರಿಕೆ ಇಲಾಖೆ ವತಿಯಿಂದ 2024-25ನೇ ಸಾಲಿನ 9 ತಿಂಗಳ ತೋಟಗಾರಿಕೆ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ತೋಟಗಾರಿಕೆ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.
ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲ್ಲೂಕಿನ ಮಾಲವಿ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ ಜುಲೈನಿಂದ 24 ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತದೆ.
ಅರ್ಜಿಗಳನ್ನು ಇಲಾಖೆ ವೆಬ್ ಸೈಟ್ horticulturedir.karnataka.gov.in ನಲ್ಲಿ ಡೌನ್‍ಲೋಡ್ ಮಾಡಿಕೊಳ್ಳಬಹುದು.
ಮಾಹಿತಿಗಾಗಿ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ ಅಥವಾ ದೂ.08392-278588 ಗೆ ಸಂಪರ್ಕಿಸಬಹುದು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.