ಬಳ್ಳಾರಿ: ‘ಚಿನ್ನ, ಬೆಳ್ಳಿ ಆಭರಣಗಳಿಂದ ಜಿಎಸ್‌ಟಿ ರೂಪದಲ್ಲಿ ಕೇಂದ್ರ ಸರ್ಕಾರಕ್ಕೆ ಸಂಗ್ರಹವಾಗುತ್ತಿರುವ ಆದಾಯದಲ್ಲಿ ಒಂದಷ್ಟು ಪಾಲನ್ನು ರಾಜ್ಯ ವಿಶ್ವಕರ್ಮ ಅಭಿವೃದ್ಧಿ ನಿಗಮಕ್ಕೆ ಮತ್ತು ಸಮುದಾಯದ ಅಭಿವೃದ್ಧಿಗೆ ನೀಡಬೇಕು’ ಎಂದು ನಿಗಮದ ಅಧ್ಯಕ್ಷ ಸುಜ್ಞಾನಮೂರ್ತಿ ಆಗ್ರಹಿಸಿದ್ದಾರೆ.
ಬಳ್ಳಾರಿಯಲ್ಲಿ ಬುಧವಾರ ಸುದ್ದಿಗೋಷ್ಠಿ ನಡೆಸಿದ ಅವರು, ‘ವಿಶ್ವಕರ್ಮ ಅಭಿವೃದ್ಧಿ ನಿಗಮಕ್ಕೆ ರಾಜ್ಯ ಸರ್ಕಾರ ನೀಡುತ್ತಿರುವ ಅನುದಾನ ಸಾಲುವುದಿಲ್ಲ. ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿರುವ ನಿರ್ಮಲಾ ಸೀತಾರಾಮನ್ ಕೇಂದ್ರದಲ್ಲಿ ಹಣಕಾಸು ಮಂತ್ರಿಯಾಗಿದ್ದಾರೆ. ಅವರ ಬಳಿಗೆ ರಾಜ್ಯದಿಂದ ನಿಯೋಗವೊಂದನ್ನು ಕರೆದೊಯ್ಯಲಾಗುವುದು. ಕೇಂದ್ರದಿಂದ ಅನುದಾನ ಕೇಳಲಾಗುವುದು’ ಎಂದು ಹೇಳಿದರು.
‘ವಿಶ್ವಕರ್ಮ ಸಮುದಾಯದ ಏಳಿಗೆಗೆ ಶ್ರಮಿಸಲಾಗುವುದು. ಸಮುದಾಯ ಜನರ ಜೀವನ ಕಷ್ಟಕರವಾಗಿದೆ. ನಿಗಮ ಹಾಗೂ ಸರ್ಕಾರದಿಂದ ದೊರೆಯುವ ಸವಲತ್ತುಗಳನ್ನು ಅರ್ಹ ಫಲಾನುಭವಿಗಳಿಗೆ ದೊರೆಯುವಂತೆ ಮಾಡಲಾಗುವುದು’ ಎಂದು ತಿಳಿಸಿದರು.
ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಲ್ಲಂ ಪ್ರಶಾಂತ್, ಮುಖಂಡರಾದ ಜಗನ್ನಾಥ್, ನಾಗರಾಜ್, ಎಲ್.ಮಾರೆಣ್ಣ, ಚಂದ್ರು, ಚಿಂದಾನಂದಪ್ಪ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.