ADVERTISEMENT

ಜಿಂದಾಲ್‌: ಮತ್ತೆ ಐವರಿಗೆ ಸೋಂಕು

​ಪ್ರಜಾವಾಣಿ ವಾರ್ತೆ
Published 10 ಜೂನ್ 2020, 10:53 IST
Last Updated 10 ಜೂನ್ 2020, 10:53 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬಳ್ಳಾರಿ: ಜಿಂದಾಲ್‌ನ ಕೊರೊನಾ ಸೋಂಕಿತ ನೌಕರರೊಂದಿಗೆ ಪ್ರಾಥಮಿಕ ಸಂಪರ್ಕ ಹೊಂದ್ದ ಇಬ್ಬರು ಪುರುಷರು ಮತ್ತು ಮೂವರು ಮಹಿಳೆಯರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಎಸ್‌.ಎಸ್‌.ನಕುಲ್‌ ತಿಳಿಸಿದ್ದಾರೆ.

ಈ ಐವರಲ್ಲಿ ಒಬ್ಬರು ಆರೋಗ್ಯ ಕಾರ್ಯಕರ್ತರೂ ಇದ್ದು, ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 75ಕ್ಕೆ ಏರಿದೆ. ಈ ಮುನ್ನ ಕೋವಿಡ್‌ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಒಬ್ಬ ಆರೋಗ್ಯ ಕಾರ್ಯಕರ್ತರಿಗೂ ಸೋಂಕು ತಗುಲಿತ್ತು. ಅವರು ಗುಣಮುಖರಾಗಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT