ADVERTISEMENT

ಕೈಗಾರಿಕೆಗಳಿಗೆ ಉತ್ತೇಜನ ಸಿಕ್ಕರೆ ನಿರುದ್ಯೋಗ ಸಮಸ್ಯೆ ನಿವಾರಣೆ: ಸಜ್ಜನ್ ಜಿಂದಾಲ್

​ಪ್ರಜಾವಾಣಿ ವಾರ್ತೆ
Published 8 ಜೂನ್ 2019, 7:07 IST
Last Updated 8 ಜೂನ್ 2019, 7:07 IST
   

ಹೊಸಪೇಟೆ: ಕೃಷಿ ಕ್ಷೇತ್ರದಿಂದ ನಿರುದ್ಯೋಗ ಸಮಸ್ಯೆಯನ್ನು ಸಂಪೂರ್ಣವಾಗಿ ನಿವಾರಿಸಲು ಸಾಧ್ಯವಿಲ್ಲ. ಹಾಗಾಗಿ ಕೈಗಾರಿಕೆಗಳ ಬೆಳವಣಿಗೆಗೆ ಹೆಚ್ಚಿನ ಉತ್ತೇಜನ ಸಿಕ್ಕರೆ ನಿರುದ್ಯೋಗ ಸಮಸ್ಯೆಯನ್ನು ದೊಡ್ಡಮಟ್ಟದಲ್ಲಿ ನಿವಾರಿಸಬಹುದು ಎಂದು ಜಿಂದಾಲ್‌ ಸಮೂಹ ಸಂಸ್ಥೆಗಳ ಅಧ್ಯಕ್ಷ ಸಜ್ಜನ್ ಜಿಂದಾಲ್‌ ಹೇಳಿದರು.

ತೋರಣಗಲ್‌ನ ಜಿಂದಾಲ್‌ನಲ್ಲಿ ಹಮ್ಮಿಕೊಂಡಿದ್ದ ಕರ್ನಾಟಕ ರಾಜ್ಯ ವಾಣಿಜ್ಯ ಮತ್ತು ಕೈಗಾರಿಕೆ ಸಂಸ್ಥೆಗಳ ರಾಜ್ಯಮಟ್ಟದ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.

ಕೃಷಿ ನಂತರ ಕೈಗಾರಿಕೆ ಕ್ಷೇತ್ರ ದೊಡ್ಡ ಶಕ್ತಿಯಾಗಿ ಬೆಳೆಯಬೇಕು. ಈ ಕ್ಷೇತ್ರ ಇನ್ನಷ್ಟು ಬೆಳೆಯುವ ಅಗತ್ಯವಿದೆ. ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳು ದೇಶದ ಆಧಾರ ಸ್ತಂಭಗಳು. ಅವುಗಳು ಗಟ್ಟಿಯಾಗಿ ಬೆಳೆಯಬೇಕು. ಜಿಂದಾಲ್ ನಂತಹ ದೊಡ್ಡ ಕಂಪೆನಿಗಳು ಬೆರಳೆಣಿಕೆಯಷ್ಟಿವೆ ಎಂದರು.

ADVERTISEMENT

ಕರ್ನಾಟಕ ದೇಶದ ಪ್ರಮುಖ ರಾಜ್ಯ. ಕೈಗಾರಿಕೆ ಕ್ಷೇತ್ರದಲ್ಲಿ ಈ ರಾಜ್ಯ ಬೆಳೆದರೆ ಇಡೀ ದೇಶ ಅಭಿವೃದ್ಧಿಯಾಗುತ್ತದೆ. ಯಾರೋ ಒಬ್ಬರು ಬೆಳೆದರೆ ಅಭಿವೃದ್ಧಿಯಲ್ಲ. ಎಲ್ಲರೂ ಬೆಳೆಯಬೇಕು ಎಂದರು.

ಮುಂದಿನ ಹತ್ತು ವರ್ಷಗಳಲ್ಲಿ ಭಾರತ, ಅಮೆರಿಕ ಹಾಗೂ ಚೀನಾ ದೊಡ್ಡ ಆರ್ಥಿಕ ಶಕ್ತಿಗಳಾಗಿ ಬೆಳೆಯಲಿವೆ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.