ADVERTISEMENT

ನ್ಯಾಯ ನಿಮ್ಮದು–ನೆರವು ನಮ್ಮದು: ನ್ಯಾಯಾಧೀಶ ಅಶೋಕ್

​ಪ್ರಜಾವಾಣಿ ವಾರ್ತೆ
Published 2 ಮೇ 2025, 14:08 IST
Last Updated 2 ಮೇ 2025, 14:08 IST
ಸಿರುಗುಪ್ಪ ನಗರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಭಾಂಗಣದಲ್ಲಿ ಶುಕ್ರವಾರ ನಡೆದ ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ಗಣ್ಯರು ಉದ್ಘಾಟಿಸಿದರು
ಸಿರುಗುಪ್ಪ ನಗರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಭಾಂಗಣದಲ್ಲಿ ಶುಕ್ರವಾರ ನಡೆದ ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ಗಣ್ಯರು ಉದ್ಘಾಟಿಸಿದರು   

ಸಿರುಗುಪ್ಪ: ‘ನಿತ್ಯ ವಿವಿಧ ಕ್ಷೇತ್ರಗಳಲ್ಲಿ ನಡೆಯುವ ಕಾರ್ಮಿಕರ ಶೋಷಣೆಯು ನಿಲ್ಲಬೇಕು. ಕಾರ್ಮಿಕರೇ ನ್ಯಾಯ ನಿಮ್ಮದು ನೆರವು ನಮ್ಮದು’ ಎಂದು ಸಿವಿಲ್ ನ್ಯಾಯಾಧೀಶ ಅಶೋಕ್ ಆರ್.ಎಚ್. ಹೇಳಿದರು.

ನಗರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಭಾಂಗಣದಲ್ಲಿ ತಾಲ್ಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಕಾರ್ಮಿಕ ಇಲಾಖೆ, ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಹಯೋಗದಲ್ಲಿ ಕಾರ್ಮಿಕ ದಿನಾಚರಣೆ ಅಂಗವಾಗಿ ಶುಕ್ರವಾರ ನಡೆದ ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಕಾರ್ಮಿಕ ನಿರೀಕ್ಷಕ ತಿರುಮಲೇಶ, ವಕೀಲರ ಸಂಘದ ಅಧ್ಯಕ್ಷ ಉಪ್ಪಾರ ವೆಂಕೋಬ, ಸಹಾಯಕ ಸರ್ಕಾರಿ ಅಭಿಯೋಜಕ ಶಿವರಾಜ್, ಪ್ಯಾನಲ್ ವಕೀಲ ಎನ್.ಅಬ್ದುಲ್ ಸಾಬ್ ರಾರಾವಿ ಮಾತನಾಡಿದರು.

ADVERTISEMENT

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಹಾಯಕ ಅಧಿಕಾರಿ ಮೋಹನ್ ಕಾಳಪ್ಪ, ವಕೀಲರ ಸಂಘದ ಉಪಾಧ್ಯಕ್ಷ ಶರೀಫ್ ಸಾಬ್ ಎಂ., ಕಾರ್ಯದರ್ಶಿ ಶಿವಕುಮಾರ ಎಂ., ತಾಲ್ಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ಬಸವರಾಜ್, ವಕೀಲರಾದ ವೆಂಕಟೇಶ್ ನಾಯ್ಕ, ಮಲ್ಲಿಗೌಡ, ನೆಲಗುಂಟೆಯ್ಯ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.