ADVERTISEMENT

ನ್ಯಾಯಾಧೀಶರಿಂದ ತನಿಖೆಯಾಗಲಿ: ವಿಜಯೇಂದ್ರ

​ಪ್ರಜಾವಾಣಿ ವಾರ್ತೆ
Published 3 ಜನವರಿ 2026, 5:27 IST
Last Updated 3 ಜನವರಿ 2026, 5:27 IST
ಗುರುವಾರ ನಡೆದ ಘರ್ಷಣೆಯಲ್ಲಿ ಗಾಯಗೊಂಡು ಬಳ್ಳಾರಿ ನಗರದ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಿಜೆಪಿ ಕಾರ್ಯಕರ್ತನನ್ನು ಭೇಟಿಯಾದ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ. ವೈ ವಿಜಯೇಂದ್ರ ಆರೋಗ್ಯ ವಿಚಾರಿಸಿದರು. ಮಾಜಿ ಸಚಿವರಾದ ಶ್ರೀರಾಮುಲು, ಆನಂದ್‌ ಸಿಂಗ್‌, ಬಂಗಾರು ಹನುಮಂತ ಮತ್ತಿತರರು ಇದ್ದರು. 
ಗುರುವಾರ ನಡೆದ ಘರ್ಷಣೆಯಲ್ಲಿ ಗಾಯಗೊಂಡು ಬಳ್ಳಾರಿ ನಗರದ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಿಜೆಪಿ ಕಾರ್ಯಕರ್ತನನ್ನು ಭೇಟಿಯಾದ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ. ವೈ ವಿಜಯೇಂದ್ರ ಆರೋಗ್ಯ ವಿಚಾರಿಸಿದರು. ಮಾಜಿ ಸಚಿವರಾದ ಶ್ರೀರಾಮುಲು, ಆನಂದ್‌ ಸಿಂಗ್‌, ಬಂಗಾರು ಹನುಮಂತ ಮತ್ತಿತರರು ಇದ್ದರು.    

ಬಳ್ಳಾರಿ: ‘ನಗರದಲ್ಲಿ ನಡೆದ ಕಲ್ಲು ತೂರಾಟ, ಬ್ಯಾನರ್ ಗಲಾಟೆ, ಕಾಂಗ್ರೆಸ್ ಪಕ್ಷದ ಕಾರ್ಯಕರ್ತನ ಸಾವು ಪ್ರಕರಣ ಹೈಕೋರ್ಟ್ ನ್ಯಾಯಾಧೀಶರಿಂದ ಸಮಗ್ರ ತನಿಖೆ ನಡೆಸಬೇಕು’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್. ವಿಜಯೇಂದ್ರ ಒತ್ತಾಯಿಸಿದರು.

ಬಳ್ಳಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪಕ್ಷದ ಕಾರ್ಯಕರ್ತರನ್ನು ಶುಕ್ರವಾರ ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ರಾಜ್ಯ ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥರು ಸೇರಿ ಶಾಸಕರಾದಿಯಾಗಿ ಯಾರೆಲ್ಲ ಇದ್ದಾರೆ, ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದರು.

‘ರಾಜಕೀಯ ತೆವಲಿಗೆ ಗುಂಡಾ ಗರ್ದಿ ಮಾಡಿಕೊಂಡು ಬ್ಯಾನರ್, ಪೋಸ್ಟರ್ ಅನುಮತಿ ಇಲ್ಲದೆ ಹಾಕಿಕೊಂಡು, ಬ್ಯಾನರ್, ಪೋಸ್ಟರ್ ಲೆಕ್ಕದಲ್ಲಿ ನಮ್ಮ ಪಕ್ಷದ ಕಾರ್ಯಕರ್ತರ ಮೇಲೆ ಗುಂಡು ಹಾರಿಸಿರುವುದು, ಶಾಸಕ ಜನಾರ್ದನರೆಡ್ಡಿ ಮನೆ ಮುಂಭಾಗದಲ್ಲಿ ನಿಂತದ್ದವರ ಮೇಲೆಯೂ ಖಾಸಗಿ ವ್ಯಕ್ತಿಗಳು ತಮ್ಮ ಗನ್‍ಮ್ಯಾನ್‍ಗಳ ಮೂಲಕ ಗುಂಡು ಹಾರಿಸಿರುವುದು ಅಕ್ಷಮ್ಯ ಅಪರಾಧ’ ಎಂದರು.

ADVERTISEMENT

‘ಕಾಂಗ್ರೆಸ್ ಪಕ್ಷದ ಮುಖಂಡನ ಜೊತೆಯಲಿದ್ದಂಥ ಗನ್‍ಮ್ಯಾನ್‍ಗಳ ಗುಂಡಿನಿಂದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತ ಪ್ರಾಣ ಕಳೆದುಕೊಂಡಿದ್ದಾನೆ. ಇದಕ್ಕೆ ಶಾಸಕ ಭರತ್ ರೆಡ್ಡಿ ಉತ್ತರಿಸಬೇಕು. ಸತೀಶ್‍ರೆಡ್ಡಿ ಎನ್ನುವ ವ್ಯಕ್ತಿ ಖಾಸಗಿ ವ್ಯಕ್ತಿಗಳನ್ನು ಬಳಸಿ ಫೈರ್ ಮಾಡಿರುವುದನ್ನು ಬಿಜೆಪಿ ಖಂಡಿಸುತ್ತದೆ’ ಎಂದರು.

ಮುಖಂಡರಾದ ಶ್ರೀರಾಮುಲು, ಸೋಮಶೇಖರೆಡ್ಡಿ, ಆನಂದಸಿಂಗ್ ಅವರು ಬಿಜೆಪಿ ಸರ್ಕಾರವಿದ್ದಾಗ ಮಹರ್ಷಿ ವಾಲ್ಮೀಕಿ ಪ್ರತಿಮೆ ಸ್ಥಾಪಿಸಿ ಗೌರವ ಕೊಡುವ ಕೆಲಸ ಮಾಡಿದ್ದಾರೆ ಎಂದು ಸಮರ್ಥಿಸಿಕೊಂಡರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.