ಹೂವಿನಹಡಗಲಿ: ಮುಂಗಾರು ಹಂಗಾಮಿನ ಕೃಷಿ ಬೆಳೆಗಳಿಗೆ ರೈತರು ಪ್ರಧಾನಮಂತ್ರಿ ಫಸಲ್ ಭೀಮಾ (ಬೆಳೆ ವಿಮೆ) ನೋಂದಣಿ ಮಾಡಿಸಬೇಕು ಎಂದು ಜಂಟಿ ಕೃಷಿ ನಿರ್ದೇಶಕ ಶರಣಪ್ಪ ಮುದಗಲ್ ತಿಳಿಸಿದರು.
ತಾಲ್ಲೂಕಿನ ಹಿರೇಹಡಗಲಿಯಲ್ಲಿ ಶುಕ್ರವಾರ ಬೆಳೆ ವಿಮೆ ನೋಂದಣಿ ಜಾಗೃತಿ ಅಭಿಯಾನದಲ್ಲಿ ಅವರು ಮಾತನಾಡಿದರು.
ಪ್ರಕೃತಿ ವಿಕೋಪದಿಂದ ಬೆಳೆ ನಷ್ಟ ಸಂಭವಿಸಿದರೆ ಬೆಳೆ ವಿಮೆ ನೋಂದಣಿ ಮಾಡಿಸಿರುವ ರೈತರಿಗೆ ಪರಿಹಾರ ಸಿಗುತ್ತದೆ. ಕಳೆದ ವರ್ಷ ಮಳೆ ಕೊರತೆಯಿಂದ ಬೆಳೆಗಳು ಹಾನಿಗೀಡಾಗಿ ರೈತರು ಸಂಕಷ್ಟಕ್ಕೆ ಸಿಲುಕಿದ್ದರು. ವಿಮೆ ಮಾಡಿಸಿದ್ದ ರೈತರಿಗೆ ಪರಿಹಾರ ಬಂದಿದೆ. ವಿಮಾ ನೋಂದಣಿಗೆ ಈಗ ಸಕಾಲವಾಗಿದ್ದು, ಜುಲೈ 31 ರೊಳಗೆ ಗ್ರಾಮ ಒನ್, ಸೇವಾ ಕೇಂದ್ರ, ಬ್ಯಾಂಕ್‌ಗಳಿಗೆ ತೆರಳಿ ನೋಂದಣಿ ಮಾಡಿಸಬೇಕು ಎಂದು ಹೇಳಿದರು.
ಸಹಾಯಕ ಕೃಷಿ ನಿರ್ದೇಶಕ ಮಹ್ಮದ್ ಆಶ್ರಫ್, ಗ್ರಾಮ ಪಂಚಾಯಿತಿ ಅಧ್ಯಕ್ಷ ಎಚ್.ಸೋಮಶೇಖರ, ಕೃಷಿ ಅಧಿಕಾರಿಗಳಾದ ರವಿಕುಮಾರ್ ಹಾವನೂರು, ಗುಂಡಿ ಚೇತನ್ ಇದ್ದರು.
ಪ್ರವಾಹ ಭೀತಿಯಲ್ಲಿರುವ ತುಂಗಭದ್ರಾ ನದಿ ತೀರದ ಮಕರಬ್ಬಿ, ಹಿರೇಬನ್ನಿಮಟ್ಟಿ ಗ್ರಾಮಕ್ಕೆ ಜಂಟಿ ಕೃಷಿ ನಿರ್ದೇಶಕರು ಭೇಟಿ ನೀಡಿ, ಮುಳುಗಡೆ ಸ್ಥಿತಿಯಲ್ಲಿರುವ ಬೆಳೆಗಳನ್ನು ವೀಕ್ಷಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.