ADVERTISEMENT

17ಕ್ಕೆ ಕಲ್ಯಾಣ ಕರ್ನಾಟಕ ಉತ್ಸವ

​ಪ್ರಜಾವಾಣಿ ವಾರ್ತೆ
Published 9 ಸೆಪ್ಟೆಂಬರ್ 2021, 16:23 IST
Last Updated 9 ಸೆಪ್ಟೆಂಬರ್ 2021, 16:23 IST

ಹೊಸಪೇಟೆ (ವಿಜಯನಗರ): ‘ಕೋವಿಡ್‌ ಇರುವುದರಿಂದ ಅಗತ್ಯ ಸುರಕ್ಷತಾ ಕ್ರಮಗಳೊಂದಿಗೆ ಸೆ. 17ರಂದು ಕಲ್ಯಾಣ ಕರ್ನಾಟಕ ಉತ್ಸವ ಹಾಗೂ ವಿಶ್ವಕರ್ಮ ಜಯಂತಿ ಆಚರಿಸಲಾಗುವುದು’ ಎಂದು ಉಪವಿಭಾಗಾಧಿಕಾರಿ ಸಿದ್ದರಾಮೇಶ್ವರ ತಿಳಿಸಿದರು.

ಗುರುವಾರ ನಗರದಲ್ಲಿ ಏರ್ಪಡಿಸಿದ್ದ ಪೂರ್ವಸಿದ್ಧತಾ ಸಭೆಯಲ್ಲಿ ಮಾತನಾಡಿದ ಅವರು, ‘ಕಲ್ಯಾಣ ಕರ್ನಾಟಕ ಉತ್ಸವಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಈಗಾಗಲೇ ಸುತ್ತೋಲೆ ಹೊರಡಿಸಿದೆ. ಅದರ ಪ್ರಕಾರ ಉತ್ಸವ ಆಚರಿಸಲಾಗುವುದು. ಕಡ್ಡಾಯವಾಗಿ ಮಾಸ್ಕ್, ಸ್ಯಾನಿಟೈಸರ್ ಬಳಸುವುದರ ಜೊತೆಗೆ ಅಂತರವನ್ನು ಕಾಯ್ದುಕೊಂಡು ಸರಳವಾಗಿ ಎಲ್ಲಾ ಶಾಲಾ-ಕಾಲೇಜು, ಸರ್ಕಾರಿ ಕಚೇರಿ, ಬ್ಯಾಂಕುಗಳಲ್ಲಿ ಸರಳವಾಗಿ ಆಚರಿಸಬೇಕು’ ಎಂದು ಹೇಳಿದರು.

‘ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಬೆಳಿಗ್ಗೆ 8ಕ್ಕೆ ಧ್ವಜಾರೋಹಣ ನೆರವೇರಿಸಬೇಕು. ಬಳಿಕ ವಿಶ್ವಕರ್ಮ ಜಯಂತಿ ಆಚರಿಸಬೇಕು. ಮಹಾತ್ಮ ಗಾಂಧೀಜಿ, ಡಾ.ಬಿ.ಆರ್.ಅಂಬೇಡ್ಕರ್, ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಭಾವಚಿತ್ರಗಳನ್ನು ಇಡಬೇಕು’ ಎಂದು ತಿಳಿಸಿದರು.

ADVERTISEMENT

ತಹಶೀಲ್ದಾರ್‌ ಎಚ್.ವಿಶ್ವನಾಥ್, ಡಿವೈಎಸ್ಪಿ ವಿಶ್ವನಾಥ್ ರಾವ್ ಕುಲಕರ್ಣಿ, ಕ್ಷೇತ್ರ ಶಿಕ್ಷಣಾಧಿಕಾರಿ ಪಿ. ಸುನಂದಾ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.