ADVERTISEMENT

ಕಂಪ್ಲಿ | ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ಅತಿಥಿ ಶಿಕ್ಷಕನ ಬಂಧನ

​ಪ್ರಜಾವಾಣಿ ವಾರ್ತೆ
Published 24 ಫೆಬ್ರುವರಿ 2026, 1:15 IST
Last Updated 24 ಫೆಬ್ರುವರಿ 2026, 1:15 IST
<div class="paragraphs"><p>ಅತ್ಯಾಚಾರ</p></div>

ಅತ್ಯಾಚಾರ

   

ಸಾಂದರ್ಭಿಕ ಚಿತ್ರ

ಕಂಪ್ಲಿ: ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯೊಂದರ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ನಡೆಸಿದ ಆರೋಪದ ಮೇಲೆ ಅತಿಥಿ ಶಿಕ್ಷಕನನ್ನು ಪೋಕ್ಸೊ ಕಾಯ್ದೆಯಡಿ ಪೊಲೀಸರು ಭಾನುವಾರ ಬಂಧಿಸಿದ್ದಾರೆ.

ADVERTISEMENT

ಫೆ.16ರಂದು ಕೃತ್ಯ ಎಸಗಿದ್ದು, ಆರೋಪಿ ವಿದ್ಯಾರ್ಥಿನಿಗೆ ಪ್ರಾಣ ಬೆದರಿಕೆ ಒಡ್ಡಿದ್ದನು ಎಂದು ಪೊಲೀಸರು ತಿಳಿಸಿದ್ದಾರೆ. ಶಿಕ್ಷಕನ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪೋಷಕರು ಮತ್ತು ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.

‘ಪುರುಷ ಅತಿಥಿ ಶಿಕ್ಷಕರ ನಿಯೋಜನೆ ಬೇಡ’ ಎಂದು ಪಟ್ಟು ಹಿಡಿದರು. ಇದಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿ ಅವರು ‘ಅಗತ್ಯ ಕ್ರಮ ತೆಗೆದುಕೊಳ್ಳಲಾಗುವುದು’ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.