
ಕಂಪ್ಲಿ: ಹುಬ್ಬಳ್ಳಿಯಲ್ಲಿ ನಡೆದ ಮರ್ಯಾದೆಗೇಡು ಹತ್ಯೆ ಪ್ರಕರಣ ಖಂಡಿಸಿ, ಅಪರಾಧಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಇಲ್ಲಿನ ಸಮಾನ ಮನಸ್ಕರ ಪ್ರಗತಿಪರ ಸಂಘಟನೆಗಳ ಒಕ್ಕೂಟದ ಪದಾಧಿಕಾರಿಗಳು ಅಂಬೇಡ್ಕರ್ ವೃತ್ತದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.
ಮಾದಿಗರ ರಕ್ಷಣಾ ವೇದಿಕೆ ರಾಜ್ಯ ಅಧ್ಯಕ್ಷ ಕರಿಯಪ್ಪ ಗುಡಿಮನಿ ಮಾತನಾಡಿ, ‘ಈ ರೀತಿಯ ಮರ್ಯಾದೆಗೇಡು ಹತ್ಯೆಗಳನ್ನು ತಡೆಗಟ್ಟಲು ವಿಶೇಷ ಕಾಯ್ದೆ ಜಾರಿ ಮಾಡಬೇಕು’ ಎಂದು ಸರ್ಕಾರಕ್ಕೆ ಒತ್ತಾಯಿಸಿದರು.
ಗೃಹ ಸಚಿವರಿಗೆ ಬರೆದ ಮನವಿಯನ್ನು ತಹಶೀಲ್ದಾರ್ ಕಚೇರಿ ಶಿರಸ್ತೇದಾರ್ ಪಂಪಾಪತಿ ಅವರಿಗೆ ಪದಾಧಿಕಾರಿಗಳು ಸಲ್ಲಿಸಿದರು.
ಒಕ್ಕೂಟದ ಪದಾಧಿಕಾರಿಗಳಾದ ವಸಂತರಾಜ ಕಹಳೆ, ಕೆ. ನೀಲಪ್ಪ, ಎ.ಎಸ್. ಯಲ್ಲಪ್ಪ, ಕೆ.ಲಕ್ಷ್ಮಣ, ಎಸ್. ಬಸವರಾಜ, ಎಚ್. ಮಂಜುನಾಥ, ಇ. ಧನಂಜಯ, ಎಂ. ಅಂಕ್ಲೇಶ, ಮಲ್ಲೇಶಪ್ಪ, ಶಾಂತಪ್ಪ ಪೂಜಾರಿ, ಎಂ. ನಾಗರಾಜ, ಸೋಮಪ್ಪ, ರಾಮಕೃಷ್ಣ, ಎಚ್. ವೀರಾಂಜಿನಿ, ಈರಣ್ಣ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.