ADVERTISEMENT

ಅಮೃತ ಮಹೋತ್ಸವ ಕಂಡ ಕನ್ನನಾಯಕನಕಟ್ಟೆ ಶಾಲೆ

​ಪ್ರಜಾವಾಣಿ ವಾರ್ತೆ
Published 13 ಜನವರಿ 2026, 7:25 IST
Last Updated 13 ಜನವರಿ 2026, 7:25 IST
ಕೊಟ್ಟೂರು ತಾಲ್ಲೂಕಿನ ಕನ್ನನಾಯಕನಕಟ್ಟೆ ಗ್ರಾಮದಲ್ಲಿ ಭಾನುವಾರ ನಡೆದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅಮೃತ ಮಹೋತ್ಸವ ಕಾರ್ಯಕ್ರಮವನ್ನು ಗಣ್ಯರು ಉದ್ಘಾಟಿಸಿದರು
ಕೊಟ್ಟೂರು ತಾಲ್ಲೂಕಿನ ಕನ್ನನಾಯಕನಕಟ್ಟೆ ಗ್ರಾಮದಲ್ಲಿ ಭಾನುವಾರ ನಡೆದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅಮೃತ ಮಹೋತ್ಸವ ಕಾರ್ಯಕ್ರಮವನ್ನು ಗಣ್ಯರು ಉದ್ಘಾಟಿಸಿದರು   

ಕೊಟ್ಟೂರು: ಗ್ರಾಮಸ್ಧರ ಸಹಕಾರ ಹಾಗೂ ಶಿಕ್ಷಕರ ಪರಿಶ್ರಮದಿಂದ ವಿವಿಧ ಪ್ರಶಸ್ತಿಗಳನ್ನು ಮುಡಿಗೇರಿಸಕೊಂಡು ಅಸಂಖ್ಯಾತ ವಿದ್ಯಾರ್ಥಿಗಳಿಗೆ ಬದುಕನ್ನು ಕಟ್ಟಿಕೊಟ್ಟ ಕನ್ನನಾಯಕನಕಟ್ಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮಾದರಿಯಾಗಿದೆ ಎಂದು ಶಿಕ್ಷಕ ಕೆ.ವೀರಭದ್ರಪ್ಪ ಅಭಿಪ್ರಾಯ ವ್ಯಕ್ತಪಡಿಸಿದರು.

ತಾಲ್ಲೂಕಿನ ಕನ್ನನಾಯಕನಕಟ್ಟೆ ಗ್ರಾಮದಲ್ಲಿ ಭಾನುವಾರ ಆಯೋಜಿಸಿದ್ದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿ, ಅನೇಕ ಸೌಕರ್ಯಗಳನ್ನು ಹೊಂದಿ ರಾಜ್ಯಮಟ್ಟದ ಪ್ರಶಸ್ತಿಗಳನ್ನು ಪಡೆದು ನಾಡಿನ ಗಮನ ಸೆಳೆಯುವಲ್ಲಿ ಈ ಶಾಲೆ ಯಶಸ್ವಿಯಾಗಿದೆ.

ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಶಾಲೆಗಳಲ್ಲಿ ಪ್ರವೇಶಾತಿ ಇಳಿಮುಖವಾಗುತ್ತಿರುವುದು ಖೇದಕರ ಸಂಗತಿಯಾಗಿದೆ. ಹಾಗಾಗಿ ಪಾಲಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಸೇರಿಸಿ ಸರ್ಕಾರ ನೀಡುವ ಅನೇಕ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಂಡು ಸರ್ಕಾರಿ ಶಾಲೆಗಳನ್ನು ಉಳಿಸಿ ಬೆಳೆಸುವತ್ತ ಮುಂದಾಗಬೇಕೆಂದು ಸಲಹೆ ನೀಡಿದರು.

ADVERTISEMENT

ಶಿಕ್ಷಕರ ಸಂಘದ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಪಿ.ನಾಗೇಶ್, ಮುಖ್ಯ ಶಿಕ್ಷಕ ಯು.ಮೂಗಪ್ಪ, ಎಸ್ ಡಿಎಂಸಿ ಅಧ್ಯಕ್ಷೆ ಜಿ.ಶೃತಿ, ಶಿಕ್ಷಕರ ಸಂಘದ ಪದಾಧಿಕಾರಿಗಳಾದ ಕೆ.ಶಶಿಕಲಾ , ಎಸ್.ಚನ್ನೇಶ್, ಬಿ.ಮುತ್ತೇಶ್, ಎಂ.ಶಿವಕುಮಾರ್, ಸರ್ಕಾರಿ ನೌಕರರ ಸಂಘದ ಉಪಾಧ್ಯಕ್ಷ ಜಿ ಸಿದ್ದಪ್ಪ, ಸಿಆರ್ ಪಿ ರವಿಕುಮಾರ್, ಬಿಆರ್ ಪಿ ರವೀಂದ್ರ, ಶಿಕ್ಷಕರಾದ ಎಚ್.ಎನ್.ಬಸವರಾಜ್, ಟಿ.ಕೊಟ್ರಪ್ಪ, ಎನ್.ದುರುಗಪ್ಪ ಹಾಗೂ ಗ್ರಾಮಸ್ಧರು ಪಾಲ್ಗೊಂಡಿದ್ದರು.

ಈ ಸಂದರ್ಭದಲ್ಲಿ ಶಾಲೆಯಲ್ಲಿ ಸೇವೆ ಸಲ್ಲಿಸಿದ ಮುಖ್ಯಶಿಕ್ಷಕರು ಹಾಗೂ ಶಿಕ್ಷಕರನ್ನು ಸನ್ಮಾನಿಸಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.