ADVERTISEMENT

ಬಳ್ಳಾರಿಯ ಹಲವೆಡೆ ಕಾರ್ಗಿಲ್ ವಿಜಯ ದಿನ ಆಚರಣೆ

ವೀರ ಯೋಧರ ತ್ಯಾಗ, ಬಲಿದಾನ ಸ್ಮರಣೆ

​ಪ್ರಜಾವಾಣಿ ವಾರ್ತೆ
Published 27 ಜುಲೈ 2025, 5:10 IST
Last Updated 27 ಜುಲೈ 2025, 5:10 IST
ನಗರದ ಬಿಜೆಪಿ ಕಚೇರಿಯಲ್ಲಿ ಶನಿವಾರ ಕಾರ್ಗಿಲ್‌ ವಿಜಯೋತ್ಸವ ದಿನದ ಅಂಗವಾಗಿ ಏರ್ಪಡಿಸಿದ್ದ ಸಮಾರಂಭದಲ್ಲಿ ನಿವೃತ್ತ ಯೋಧರಿಗೆ ಸನ್ಮಾನಿಸಲಾಯಿತು. ಮಾಜಿ ಸಚಿವ ಶ್ರೀರಾಮುಲು ಸೇರಿದಂತೆ ಹಲವರು ಇದ್ದರು. 
ನಗರದ ಬಿಜೆಪಿ ಕಚೇರಿಯಲ್ಲಿ ಶನಿವಾರ ಕಾರ್ಗಿಲ್‌ ವಿಜಯೋತ್ಸವ ದಿನದ ಅಂಗವಾಗಿ ಏರ್ಪಡಿಸಿದ್ದ ಸಮಾರಂಭದಲ್ಲಿ ನಿವೃತ್ತ ಯೋಧರಿಗೆ ಸನ್ಮಾನಿಸಲಾಯಿತು. ಮಾಜಿ ಸಚಿವ ಶ್ರೀರಾಮುಲು ಸೇರಿದಂತೆ ಹಲವರು ಇದ್ದರು.    

ಬಳ್ಳಾರಿ: ಕಾರ್ಗಿಲ್ ವಿಜಯ ದಿವಸ್ ಅಂಗವಾಗಿ ಬಳ್ಳಾರಿಯ ವಿವಿಧೆಡೆ ಶನಿವಾರ ಹುತಾತ್ಮ ಯೋಧರ ಸ್ಮರಣೆ ಕಾರ್ಯಕ್ರಗಳು ನಡೆದವು.   

ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ವೀರ ಯೋಧರಿಗೆ ಕಾರ್ಯಕ್ರಮಗಳಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಜಿಲ್ಲೆಯ ಮಾಜಿ ಸೈನಿಕರು. ಸ್ಕೌಟ್ ಅಂಡ್ ಗೈಡ್ಸ್ ವಿದ್ಯಾರ್ಥಿಗಳು, ರೈತ ಸಂಘಟನೆಗಳು ಹಾಗೂ ವಿವಿಧ ಶಾಲಾ ಮಕ್ಕಳು ಸೇರಿ ನಗರದ ಎಸ್ಪಿ ಕಚೇರಿ ಬಳಿಯ ಅಮರ್ ಜವಾನ್ ಯುದ್ಧ ಸ್ಮಾರಕಕ್ಕೆ ಆಗಮಿಸಿ ಗೌರವ ಸಮರ್ಪಿಸಿದರು. 

ADVERTISEMENT

ನಿವೃತ್ತ ಸೈನಿಕರ ಸಂಘದಿಂದ ಶ್ರದ್ಧಾಂಜಲಿ ಸಭೆ ನಡೆಯಿತು. ಈವೇಳೆ ಗಣ್ಯರು ಸೈನಿಕರ ತ್ಯಾಗ, ಬಲಿದಾನಗಳನ್ನು ಸ್ಮರಿಸಿದರು.

ನಮ್ಮ ದೇಶ ಜಾತ್ಯತೀತ ಮತ್ತು ಕೃಷಿ ಆಧಾರಿತ ದೇಶ. ಭಾರತದ ಸೈನಿಕರು ಯುದ್ದದ ಸಂದರ್ಭದಲ್ಲಿ ಪ್ರಾಣವನ್ನೇ ಪಣವಾಗಿಟ್ಟು ದೇಶವನ್ನು ಕಾಪಾಡಿದ್ದಾರೆ. ಯೋಧರು ಹಾಗೂ ರೈತರು ಈ ದೇಶದ ಬೆನ್ನೆಲುಬು ಎಂದು ರಾಜ್ಯ ರೈತ ಸಂಘ ಹಸಿರು ಸೇನೆಯ ಅಧ್ಯಕ್ಷ ಮಾಧವ ರೆಡ್ಡಿ ಅಭಿಪ್ರಾಯಪಟ್ಟರು. 

ಬಿಜೆಪಿ ಕಚೇರಿಯಲ್ಲಿ ವಿಜಯೋತ್ಸವ ಆಚರಣೆ: ಕಾರ್ಗಿಲ್ ವಿಜಯೋತ್ಸವ ಪ್ರಯುಕ್ತ ಬಳ್ಳಾರಿಯ ಬಿಜೆಪಿ ಕಚೇರಿಯಲ್ಲಿ ಭಾರತಮಾತೆಗೆ ಪುಪ್ಪ್ಪಾರ್ಚನೆ ಸಲ್ಲಿಸಲಾಯಿತು. ಕಾರ್ಗಿಲ್‌ ಯುದ್ಧದಲ್ಲಿ ಪಾಲ್ಗೊಂಡಿದ್ದ ವೀರ ಯೋಧ ಪ್ರವೀಣ್‍ಕುಮಾರ್ ಅವರನ್ನು ಸನ್ಮಾನಿಸಲಾಯಿತು. ಈ ವೇಳೆ ಬಿಜೆಪಿ ಮುಖಂಡರು ಹಾಗೂ ಪ್ರಮುಖರು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.