ADVERTISEMENT

ಶ್ರೀರಾಮುಲು, ಆನಂದ್‌ ಸಿಂಗ್‌ ಪುಷ್ಕರ ಪುಣ್ಯಸ್ನಾನ

​ಪ್ರಜಾವಾಣಿ ವಾರ್ತೆ
Published 30 ನವೆಂಬರ್ 2020, 6:55 IST
Last Updated 30 ನವೆಂಬರ್ 2020, 6:55 IST
ಅರಣ್ಯ ಸಚಿವ ಆನಂದ್‌ ಸಿಂಗ್‌, ಸಮಾಜ ಕಲ್ಯಾಣ ಸಚಿವ ಬಿ. ಶ್ರೀರಾಮುಲು ಅವರು ಸೋಮವಾರ ಇಲ್ಲಿನ ಹಂಪಿಯಲ್ಲಿ ಪುಣ್ಯ ಸ್ನಾನ ಮಾಡಿದರು.
ಅರಣ್ಯ ಸಚಿವ ಆನಂದ್‌ ಸಿಂಗ್‌, ಸಮಾಜ ಕಲ್ಯಾಣ ಸಚಿವ ಬಿ. ಶ್ರೀರಾಮುಲು ಅವರು ಸೋಮವಾರ ಇಲ್ಲಿನ ಹಂಪಿಯಲ್ಲಿ ಪುಣ್ಯ ಸ್ನಾನ ಮಾಡಿದರು.   

ಹೊಸಪೇಟೆ: ತುಂಗಭದ್ರಾ ನದಿ ಪುಷ್ಕರ ಮಹೋತ್ಸವದ ಪ್ರಯುಕ್ತ ಅರಣ್ಯ ಸಚಿವ ಆನಂದ್‌ ಸಿಂಗ್‌, ಸಮಾಜ ಕಲ್ಯಾಣ ಸಚಿವ ಬಿ. ಶ್ರೀರಾಮುಲು ಅವರು ಸೋಮವಾರ ಇಲ್ಲಿನ ಹಂಪಿಯಲ್ಲಿ ಪುಣ್ಯ ಸ್ನಾನ ಮಾಡಿದರು.

ಇಬ್ಬರೂ ಮಡಿ ಬಟ್ಟೆಯುಟ್ಟು, ಹಂಪಿಯ ಚಕ್ರತೀರ್ಥದ ತುಂಗಭದ್ರಾ ನದಿಯಲ್ಲಿ ಮಿಂದೆದ್ದರು. ಬಳಿಕ ನದಿಗೆ ಪೂಜೆ ನೆರವೇರಿಸಿದರು.

ಭಾನುವಾರ ಏರ್ಪಡಿಸಿದ್ದ ಬಿಜೆಪಿಯ ಗ್ರಾಮ ಸ್ವರಾಜ್ಯ ಸಮಾವೇಶದಲ್ಲಿ ಪಾಲ್ಗೊಂಡ ನಂತರ ಇಬ್ಬರೂ ಸಚಿವರು ರಾತ್ರಿ ನಗರದಲ್ಲಿಯೇ ವಾಸ್ತವ್ಯ ಹೂಡಿದ್ದರು. ಸಚಿವ ಆನಂದ್‌ ಸಿಂಗ್‌ ಅವರ ಮಗ ಸಿದ್ದಾರ್ಥ ಸಿಂಗ್‌ ಹಾಗೂ ಅವರ ಬೆಂಬಲಿಗರು ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.