ADVERTISEMENT

SSLC Result 2025 | ಕೂಡ್ಲಿಗಿ ತಾಲ್ಲೂಕು ಶೇ 67.56 ಸಾಧನೆ

​ಪ್ರಜಾವಾಣಿ ವಾರ್ತೆ
Published 3 ಮೇ 2025, 14:25 IST
Last Updated 3 ಮೇ 2025, 14:25 IST

ಕೂಡ್ಲಿಗಿ: ಎಸ್‍ಎಸ್‍ಎಲ್‍ಸಿ ಫಲಿತಾಂಶದಲ್ಲಿ ತಾಲ್ಲೂಕಿನಲ್ಲಿ ಶೇ 67.56ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಪದ್ಮನಾಭ ಕರಣಂ ತಿಳಿಸಿದ್ದಾರೆ.

ತಾಲ್ಲೂಕಿನ ಒಟ್ಟು 4788 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 3235 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಇವರಲ್ಲಿ 2439 ಬಾಲಕರು ಪರೀಕ್ಷೆ ಬರೆದಿದ್ದು, 1507 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. 2349 ಬಾಲಕಿಯರು ಪರೀಕ್ಷೆ ಬರೆದಿದ್ದು, 1728 ಬಾಲಕಿಯರು ಉತ್ತೀರ್ಣರಾಗಿದ್ದಾರೆ.

ಕಳೆದ ಬಾರಿ ಶೇ 73.49ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದರು. ಆದರೆ ಈ ಬಾರಿ ಶೇ 67.56 ತೇರ್ಗಡೆಯಾಗಿದ್ದಾರೆ. ಇದರಿಂದ ಶೇ 5.93ರಷ್ಟು ಕುಸಿತ ಕಂಡಿದ್ದು, ಜಿಲ್ಲೆಯಲ್ಲಿ ಮೂರನೇ ಸ್ಥಾನ ಪಡೆದಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.