ADVERTISEMENT

ಸಂಡೂರು: 29ರಂದು ಕಸಾಪ ಸಭೆ

​ಪ್ರಜಾವಾಣಿ ವಾರ್ತೆ
Published 7 ಜೂನ್ 2025, 23:30 IST
Last Updated 7 ಜೂನ್ 2025, 23:30 IST

ಬಳ್ಳಾರಿ: ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿ ಸಭೆಯು ಪರಿಷತ್ತಿನ ಅಧ್ಯಕ್ಷ ಮಹೇಶ ಜೋಶಿ ಅವರ ಅಧ್ಯಕ್ಷತೆಯಲ್ಲಿ ಜೂನ್ 29ರಂದು ಬೆಳಿಗ್ಗೆ 9ಕ್ಕೆ ಸಂಡೂರಿನ ಆದರ್ಶ ಕಲ್ಯಾಣ ಮಂಟಪದಲ್ಲಿ ನಡೆಯಲಿದೆ.

‘ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸಮ್ಮೇಳನಾಧ್ಯಕ್ಷರ ಬಗ್ಗೆ ಸಂಡೂರಿನಲ್ಲಿ ಚರ್ಚಿಸಿ, ನಿರ್ಣಯ ಕೈಗೊಂಡು, ಅದನ್ನು ಘೋಷಿಸುವ ಮೂಲಕ ಹೊಸ ಪರಂಪರೆಗೆ ನಾಂದಿ ಹಾಡಬೇಕು. ಸಮ್ಮೇಳನದ ಚಟುವಟಿಕೆಗಳಿಗೆ ಚಾಲನೆ ನೀಡಬೇಕು’ ಎಂದು ಬಳ್ಳಾರಿ ಜಿಲ್ಲಾ ಘಟಕದ ಅಧ್ಯಕ್ಷ ನಿಷ್ಠಿ ರುದ್ರಪ್ಪ ಕೋರಿದ್ದರು. ಅದರಂತೆ ಪರಿಷತ್ತಿನ ಗೌರವ ಕಾರ್ಯದರ್ಶಿ ಅವರು ಸಭೆ ಕುರಿತು ಸೂಚನಾ ಪತ್ರ ಹೊರಡಿಸಿದ್ದಾರೆ.

ಪರಿಷತ್ತಿನ ನಿಬಂಧನೆ (ಬೈಲಾ) ತಿದ್ದುಪಡಿ ಉದ್ದೇಶದಿಂದ ಸರ್ವ ಸದಸ್ಯರ ವಿಶೇಷ ಸಾಮಾನ್ಯ ಸಭೆಯು ಏಪ್ರಿಲ್‌ 27ರಂದು ಸಂಡೂರಿನ ನಂದಿಹಳ್ಳಿಯಲ್ಲಿ ನಿಗದಿಯಾಗಿತ್ತು. ಆಕ್ಷೇಪ ವ್ಯಕ್ತವಾದ ಕಾರಣ ಸಭೆ ಮುಂದೂಡಲ್ಪಟ್ಟಿತ್ತು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.