ADVERTISEMENT

ಕೆಚ್ಚಿನಬಂಡಿ ಸಕ್ಕರೆ ಕಾರ್ಖಾನೆ ಸ್ಥಾಪನೆ

ಕಂಪ್ಲಿ ತಾಲ್ಲೂಕು ರೈತರಿಗೆ ಅನುಕೂಲ: ಬಿ.ಗಂಗಾಧರ್

​ಪ್ರಜಾವಾಣಿ ವಾರ್ತೆ
Published 10 ಜೂನ್ 2025, 15:39 IST
Last Updated 10 ಜೂನ್ 2025, 15:39 IST
ಕಂಪ್ಲಿಯಲ್ಲಿ ಮಂಗಳವಾರ ನಡೆದ ಅಖಿಲ ಕರ್ನಾಟಕ ರಾಜ್ಯ ಕಿಸಾನ್ ಜಾಗೃತಿ ಸಂಘದ ಪದಾಧಿಕಾರಿಗಳ ಸಭೆಯಲ್ಲಿ ಸಂಘದ ಬಳ್ಳಾರಿ ಜಿಲ್ಲಾ ಅಧ್ಯಕ್ಷ ಬಿ. ಗಂಗಾಧರ್ ಮತನಾಡಿದರು
ಕಂಪ್ಲಿಯಲ್ಲಿ ಮಂಗಳವಾರ ನಡೆದ ಅಖಿಲ ಕರ್ನಾಟಕ ರಾಜ್ಯ ಕಿಸಾನ್ ಜಾಗೃತಿ ಸಂಘದ ಪದಾಧಿಕಾರಿಗಳ ಸಭೆಯಲ್ಲಿ ಸಂಘದ ಬಳ್ಳಾರಿ ಜಿಲ್ಲಾ ಅಧ್ಯಕ್ಷ ಬಿ. ಗಂಗಾಧರ್ ಮತನಾಡಿದರು   

ಕಂಪ್ಲಿ: ವಿಜಯನಗರ ಜಿಲ್ಲೆ ಹಗರಿಬೊಮ್ಮನಹಳ್ಳಿ ತಾಲ್ಲೂಕಿನ ಕೆಚ್ಚಿನಬಂಡಿ ಗ್ರಾಮದಲ್ಲಿ ಸಕ್ಕರೆ ಕಾರ್ಖಾನೆ ಆರಂಭವಾಗುವುದರಿಂದ ಕಂಪ್ಲಿ ತಾಲ್ಲೂಕಿನಲ್ಲಿ ಕಬ್ಬು ಬೆಳೆಯುವ ರೈತರಿಗೆ ತುಂಬಾ ಅನುಕೂಲವಾಗಲಿದೆ ಎಂದು ಅಖಿಲ ಕರ್ನಾಟಕ ರಾಜ್ಯ ಕಿಸಾನ್ ಜಾಗೃತಿ ಸಂಘದ ಬಳ್ಳಾರಿ ಜಿಲ್ಲಾ ಅಧ್ಯಕ್ಷ ಬಿ.ಗಂಗಾಧರ್ ತಿಳಿಸಿದರು.

ಇಲ್ಲಿಯ ಅತಿಥಿಗೃಹ ಆವರಣದಲ್ಲಿ ಮಂಗಳವಾರ ನಡೆದ ಅಖಿಲ ಕರ್ನಾಟಕ ರಾಜ್ಯ ಕಿಸಾನ್ ಜಾಗೃತಿ ಸಂಘದ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿ, ಕೇವಲ 52 ಕಿ.ಮೀ ಅಂತರದಲ್ಲಿ ಕಾರ್ಖಾನೆ ಸ್ಥಾಪಿಸುವುದರಿಂದ ಸಮಯ, ಸಾಗಾಣೆ ವೆಚ್ಚ ಉಳಿತಾಯವಾಗಲಿದೆ ಎಂದರು.

ರಾಣಿ ಸಂಯುಕ್ತ ಅವರು ಸಕ್ಕರೆ ಕಾರ್ಖಾನೆ ಸ್ಥಾಪಿಸಲು ಮುಂದಾಗಿರುವುದರಿಂದ ಸರ್ಕಾರ ಎಲ್ಲ ರೀತಿಯ ಅನುಕೂಲ ಕಲ್ಪಿಸಬೇಕು ಎಂದು ಮನವಿ ಮಾಡಿದರು.

ADVERTISEMENT

ವಿಜಯನಗರ ಜಿಲ್ಲೆಯಲ್ಲಿ ಸಕ್ಕರೆ ಕಾರ್ಖಾನೆ ಪುನರ್ ಸ್ಥಾಪನೆಗೆ ಈ ಹಿಂದೆ ನಮ್ಮ ಸಂಘಟನೆಯಿಂದ ನಡೆದ ಹೋರಾಟದಲ್ಲಿ ನಿವೃತ್ತ ಲೋಕಾಯುಕ್ತ ಸಂತೋಷ್ ಹೆಗಡೆ ಅವರ ನೇತೃತ್ವದಲ್ಲಿ ಹಂಪಿಯಿಂದ ಹೊಸಪೇಟೆವರೆಗೆ ಕಾಲ್ನಡಿಗೆÉ ಜಾಥಾ ನಡೆಸಿದ್ದನ್ನು ನೆನಪಿಸಿದರು.

ಕಂಪ್ಲಿಯಲ್ಲಿರುವ ಹಳೆ ಸಕ್ಕರೆ ಕಾರ್ಖಾನೆ ಪ್ರದೇಶದಲ್ಲಿ ಸಹಕಾರಿ ಇಲ್ಲವೇ ಸಾರ್ವಜನಿಕ ವಲಯದ ಸಕ್ಕರೆ ಕಾರ್ಖಾನೆ ಆರಂಭಿಸುವಂತೆ ಸರ್ಕಾರಕ್ಕೆ ಒತ್ತಾಯಿಸಿದರು. ಕಡೆಗಣಿಸಿದಲ್ಲಿ ಹೋರಾಟ ಹಮ್ಮಿಕೊಳ್ಳುವುದಾಗಿಯೂ ಎಚ್ಚರಿಸಿದರು.

ಸಂಘದ ರಾಜ್ಯ ಉಪಾಧ್ಯಕ್ಷ ಎಸ್.ಎ. ಖಾದ್ರಿ ಮಾತನಾಡಿ, ಹೊಸಪೇಟೆಯಲ್ಲಿ ನಡೆದ ಕಾಂಗ್ರೆಸ್ ಸಾಧನಾ ಸಮಾವೇಶದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಸಕ್ಕರೆ ಕಾರ್ಖಾನೆ ಸ್ಥಾಪಿಸುವ ಭರವಸೆ ನೀಡಿದಂತೆ ನಡೆದುಕೊಳ್ಳಲಿ ಎಂದರು.

ಸಂಘದ ತಾಲ್ಲೂಕು ಅಧ್ಯಕ್ಷ ಗುಬಾಜಿ ರಾಮಾಂಜನಿ, ವಿಜಯನಗರ ಜಿಲ್ಲೆ ಮಹಿಳಾ ಘಟಕದ ಅಧ್ಯಕ್ಷೆ ಎಂ. ರತ್ನಮ್ಮ, ರಾಜ್ಯ ಉಪಾಧ್ಯಕ್ಷೆ ವಿ. ಉಷಾ, ಜಿಲ್ಲಾ ಯುವ ಘಟಕದ ಅಧ್ಯಕ್ಷ ಕೆ. ಹರ್ಷಿತ್, ಪದಾಧಿಕಾರಿಗಳು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.