ಅಪಘಾತ
ತೆಕ್ಕಲಕೋಟೆ (ಬಳ್ಳಾರಿ): ಇಲ್ಲಿನ ರಾಷ್ಟ್ರೀಯ ಹೆದ್ದಾರಿ 150ಎ ಬೈರಾಪುರ ಬಳಿ ನಿಂತಿದ್ದ ಲಾರಿಗೆ ಹಿಂದಿನಿಂದ ಬಂದ ಕೆಕೆಆರ್‌ಟಿಸಿ ಬಸ್ ಡಿಕ್ಕಿ ಹೊಡೆದಿದ್ದು, ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಶನಿವಾರ ರಾತ್ರಿ ಈ ಘಟನೆ ನಡೆದಿದೆ. 12 ಪ್ರಯಾಣಿಕರು ತೀವ್ರವಾಗಿ ಗಾಯಗೊಂಡಿದ್ದಾರೆ.
ಮೃತರನ್ನು ರಾಮನಗರ ಜಿಲ್ಲೆಯ ಕನಕಪುರ ತಾಲ್ಲೂಕಿನ ಚೌಡಸಂದ್ರ ಗ್ರಾಮದ ಬಾಲನಾಯಕ (46) ಹಾಗೂ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಶ್ವೇತಾ (42) ಎಂದು ಗುರುತಿಸಲಾಗಿದೆ.
ಮೃತ ದೇಹಗಳನ್ನು ಸಿರುಗುಪ್ಪ ತಾಲ್ಲೂಕು ಸರ್ಕಾರಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.
ಗಾಯಗೊಂಡವರನ್ನು ಬಳ್ಳಾರಿಯ ಟ್ರಾಮಾ ಕೇರ್ ಸೆಂಟರ್‌ಗೆ ಹಾಗೂ ಸಿರುಗುಪ್ಪ ತಾಲ್ಲೂಕು ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಸಿರಿಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.