ಪ್ರಜಾವಾಣಿ ವಾರ್ತೆ
ಕೊಟ್ಟೂರು: ‘ಮಾದಕ ದ್ರವ್ಯಕ್ಕೆ ಯುವ ಪೀಳಿಗೆ ಬಲಿಯಾಗುತ್ತಿದೆ. ಇದರಿಂದ ದೂರವಾಗಿ ದೇಶ ಸೇವೆಗೆ ಮುಂದಾಗಬೇಕು’ ಎಂದು ಪಿಎಸ್ಐ ಗೀತಾಂಜಲಿ ಶಿಂಧೆ ಹೇಳಿದರು.
ಪಟ್ಟಣದ ತೊಟ್ಟಿಲು ಮಠದ ಸಭಾಂಗಣದಲ್ಲಿ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆ ವತಿಯಿಂದ ಭಾನುವಾರ ಹಮ್ಮಿಕೊಂಡಿದ್ದ ಅಂತರರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿರು.
ಧರ್ಮಸ್ಥಳ ಸಂಸ್ಥೆಯ ಜಿಲ್ಲಾ ನಿರ್ದೇಶಕ ಸತೀಶ್ ಶೆಟ್ಟಿ ಮಾತನಾಡಿ, ‘ಸಂಸ್ಥೆಯಿಂದ ಮದ್ಯವರ್ಜನಾ ಶಿಬಿರ, ಸ್ವಾಸ್ಥ್ಯ ಸಂಕಲ್ಪ ಮೊದಲಾದ ಜನಪರ ಕಾರ್ಯಕ್ರಮಗಳ ಮೂಲಕ ಸಮಾಜದಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ’ ಎಂದರು.
ಬಿ. ಮರಿಸ್ವಾಮಿ ಮಾತನಾಡಿದರು. ಪಟ್ಟಣ ಪಂಚಾಯಿತಿ ಉಪಾಧ್ಯಕ್ಷ ಎಂ. ಸಿದ್ಧಯ್ಯ, ಸದಸ್ಯೆ ವಿದ್ಯಾಶ್ರೀ, ಸರ್ಕಾರಿ ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಯೋಗೀಶ್ವರ ದಿನ್ನೆ, ಒಕ್ಕೂಟದ ಅಧ್ಯಕ್ಷೆ ಉಮಾದೇವಿ, ಈರಮ್ಮ, ಯೋಜನಾಧಿಕಾರಿ ನವೀನಕುಮಾರ್, ಮಹಾಂತೇಶ್, ಜಗದೀಶ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.