ADVERTISEMENT

ಕೊಟ್ಟೂರು: ಮೆಕ್ಕೆಜೋಳ ಖರೀದಿ ಕೇಂದ್ರಕ್ಕೆ ರೈತರ ಒತ್ತಾಯ– ಧರಣಿ ಎಚ್ಚರಿಕೆ

​ಪ್ರಜಾವಾಣಿ ವಾರ್ತೆ
Published 18 ನವೆಂಬರ್ 2025, 6:13 IST
Last Updated 18 ನವೆಂಬರ್ 2025, 6:13 IST
ಕೊಟ್ಟೂರಿನ ತಾಲ್ಲೂಕು ಕಚೇರಿಯಲ್ಲಿ ರೈತ ಸಂಘದ ಪದಾಧಿಕಾರಿಗಳು ಮೆಕ್ಕೆಜೋಳ ಖರೀದಿ ಕೇಂದ್ರ ತೆರೆಯುವಂತೆ ಒತ್ತಾಯಿಸಿ ಸೋಮವಾರ ಗ್ರೇಡ್– 2 ತಹಶೀಲ್ದಾರ್ ಎಂ.ಪ್ರತಿಭಾ ಅವರಿಗೆ ಮನವಿ ಸಲ್ಲಿಸಿದರು
ಕೊಟ್ಟೂರಿನ ತಾಲ್ಲೂಕು ಕಚೇರಿಯಲ್ಲಿ ರೈತ ಸಂಘದ ಪದಾಧಿಕಾರಿಗಳು ಮೆಕ್ಕೆಜೋಳ ಖರೀದಿ ಕೇಂದ್ರ ತೆರೆಯುವಂತೆ ಒತ್ತಾಯಿಸಿ ಸೋಮವಾರ ಗ್ರೇಡ್– 2 ತಹಶೀಲ್ದಾರ್ ಎಂ.ಪ್ರತಿಭಾ ಅವರಿಗೆ ಮನವಿ ಸಲ್ಲಿಸಿದರು   

ಕೊಟ್ಟೂರು: ಮುಂಗಾರು ಹಂಗಾಮಿನಲ್ಲಿ ಮೆಕ್ಕೆಜೋಳ ಇಳುವರಿ ಸಮೃದ್ಧವಾಗಿ ಬಂದಿರುವುದರಿಂದ ಕೂಡಲೇ ಖರೀದಿ ಕೇಂದ್ರ ತೆರೆದು ರೈತರಿಗೆ ನ್ಯಾಯಯುತ ಬೆಲೆ ದೊರಕಿಸಿಕೊಡಲು ಸರ್ಕಾರ ಮುಂದಾಗಬೇಕೆಂದು ರೈತ ಸಂಘದ ತಾಲ್ಲೂಕು ಘಟಕದ ಪ್ರಧಾನ ಕಾರ್ಯದರ್ಶಿ ಗುಡಿಯಾರ ಮಲ್ಲಿಕಾರ್ಜುನ್ ಆಗ್ರಹಿಸಿದರು.

ಪಟ್ಟಣದ ತಾಲ್ಲೂಕು ಕಛೇರಿಯಲ್ಲಿ ಗ್ರೇಡ್ 2 ತಹಶೀಲ್ದಾರ್ ಎಂ.ಪ್ರತಿಭಾ ಅವರಿಗೆ ಸೋಮವಾರ ಮನವಿ ಸಲ್ಲಿಸಿ ಮಾತನಾಡಿ, ದಲ್ಲಾಲಿ ಅಂಗಡಿಗಳಲ್ಲಿ ಮಾರಾಟ ಮಾಡಿದರೆ ಕಡಿಮೆ ದರ ನಿಗದಿಪಡಿಸುವುದಲ್ಲದೇ ಬಿಳಿ ಚೀಟಿ ನೀಡುತ್ತಿರುವುದರಿಂದ ರೈತರಿಗೆ ಅನ್ಯಾಯವಾಗುತ್ತಿದ್ದು ಎಪಿಎಂಸಿ ಆಡಳಿತ ಮಂಡಳಿ ಕ್ರಮ ಕೈಗೊಳ್ಳಬೇಕೆಂದರು.

ಗ್ರಾಮಾಂತರ ಪ್ರದೇಶದಲ್ಲಿ ರಾತ್ರಿ ವಿದ್ಯುತ್ ಪೂರೈಸುವುದರಿಂದ ರೈತರು ಜಮೀನುಗಳಿಗೆ ನೀರು ಹಾಯಿಸಲು ಅನಾಕೂಲವಾಗುತ್ತದೆ. ಜೆಸ್ಕಾಂ ಇಲಾಖೆ ಹಗಲಿನಲ್ಲಿ ವಿದ್ಯುತ್ ಪೂರೈಕೆ ಮಾಡಬೇಕು ಎಂದು ಒತ್ತಾಯಿಸಿದರು.

ADVERTISEMENT

ರಾಂಪುರ ಸುಧಾಕರ್, ಚಿರಿಬಿ ಸುರೇಶ್, ಸಿದ್ಧೇಶ, ಕರಿಯಪ್ಪ, ಕೆ.ಬಸವರಾಜ್, ಕೆ.ಕೆಂಚಪ್ಪ, ಪಿ.ಚಂದ್ರಶೇಖರ್, ಎಚ್.ಪರಸಪ್ಪ, ಶೇಖರ್ ನಾಯ್ಕ, ನಾಗಪ್ಪ, ವೀರಭದ್ರಪ್ಪ ರೈತರು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.