
ಕೊಟ್ಟೂರು: ‘ಸಮಾಜದಲ್ಲಿರುವ ನ್ಯೂನತೆಗಳನ್ನು ತಿದ್ದುವಲ್ಲಿ ನಾಟಕ ಪ್ರಮುಖ ಪಾತ್ರವಹಿಸುತ್ತದೆ’ ಎಂದು ಗುತ್ತಿಗೆದಾರ ಎನ್.ಹೇಮಣ್ಣ ಅಲಬೂರು ಹೇಳಿದರು.
ಪಟ್ಟಣದ ಎಪಿಎಂಸಿ ಆವರಣದಲ್ಲಿ ಕೊಟ್ಟೂರೇಶ್ವರಸ್ವಾಮಿ ರಥೋತ್ಸವದ ಪ್ರಯುಕ್ತ ಕುಡುತಿನಿಮೊಗ್ಗೆ ಗ್ರಾಮದ ವಿನಾಯಕ ಮಿತ್ರ ಬಳಗದ ವತಿಯಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದೊಂದಿಗೆ ಶನಿವಾರ ಆಯೋಜಿಸಿದ್ದ ‘ಪ್ರಚಂಡ ಪರಶುರಾಮ’ ನಾಟಕಕ್ಕೆ ಚಾಲನೆ ನೀಡಿ ಮಾತನಾಡಿದರು.
‘ಇತ್ತಿಚಿನ ದಿನಗಳಲ್ಲಿ ನಾಟಕ ನೋಡುವ ಹವ್ಯಾಸ ಕಡಿಮೆಯಾಗುತ್ತಿರುವುದು ಆತಂಕದ ವಿಷಯ. ನಾಟಕಗಳು ಸಮಾಜದಲ್ಲಿನ ಪ್ರಚಲಿತ ವಿದ್ಯಮಾನಗಳನ್ನು ಪ್ರತಿಬಿಂಬಿಸುವುದರಿಂದ ನೋಡುವ ಹವ್ಯಾಸವನ್ನು ಎಲ್ಲರೂ ಬೆಳೆಸಿಕೊಳ್ಳಬೇಕು’ ಎಂದರು.
ರೆಡ್ಡಿ ಸಂಘದ ತಾಲ್ಲೂಕು ಘಟಕದ ಗೌರವಾಧ್ಯಕ್ಷ ಪಿ.ದೇವೇಂದ್ರಗೌಡ ಮಾತನಾಡಿ, ‘ರಂಗಭೂಮಿ ಪ್ರಾಚೀನ ಕಾಲದಿಂದಲೂ ಮನರಂಜನಾ ಮಾಧ್ಯಮಗಳಲ್ಲಿ ಒಂದಾಗಿದ್ದು, ಜನರ ಮನಸ್ಸಿಗೆ ಮುದ ನೀಡುತ್ತದೆ’ ಎಂದರು.
ಗ್ರಾಮ ಪಂಚಾಯಿಂದ ಅಧ್ಯಕ್ಷೆ ಹೊಳಲಮ್ಮ ಹನುಮಂತಪ್ಪ ಅಧ್ಯಕ್ಷತೆ ವಹಿಸಿ ಮಾತನಾಡಿದರು. ರೆಡ್ಡಿ ಸಂಘದ ತಾಲ್ಲೂಕು ಘಟಕದ ಉಪಾಧ್ಯಕ್ಷ ಗೂಳಿ ಸುರೇಶ್, ತಿಮ್ಮಲಾಪುರ ಕೊಟ್ರೇಶ್, ಬಿಡಿಸಿಸಿ ಬ್ಯಾಂಕ್ ಕ್ಷೇತ್ರಾಧಿಕಾರಿ ಎಂ.ಕೊಟ್ರೇಶ್, ದೂಪದಹಳ್ಳಿ ಮಂಜುನಾಥ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.