ADVERTISEMENT

ಕೊಟ್ಟೂರು | ‘ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುವೆ’

​ಪ್ರಜಾವಾಣಿ ವಾರ್ತೆ
Published 15 ಜನವರಿ 2026, 2:44 IST
Last Updated 15 ಜನವರಿ 2026, 2:44 IST
ಕೊಟ್ಟೂರಿನ 10ನೇ ವಾರ್ಡಿನ ಸಿ.ಸಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಕೆ.ನೇಮರಾಜನಾಯ್ಕ ಬುಧವಾರ ಭೂಮಿಪೂಜೆ ನೆರವೇರಿಸಿದರು
ಕೊಟ್ಟೂರಿನ 10ನೇ ವಾರ್ಡಿನ ಸಿ.ಸಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಕೆ.ನೇಮರಾಜನಾಯ್ಕ ಬುಧವಾರ ಭೂಮಿಪೂಜೆ ನೆರವೇರಿಸಿದರು   

ಕೊಟ್ಟೂರು: ಕ್ಷೇತ್ರದಾದ್ಯಂತ ಮೂಲಸೌಕರ್ಯಗಳಿಗೆ ಆದ್ಯತೆ ನೀಡುವ ಮೂಲಕ ಮಾದರಿ ಕ್ಷೇತ್ರವನ್ನಾಗಿಸಲು ಶ್ರಮಿಸುವೆ ಎಂದು ಶಾಸಕ ಕೆ.ನೇಮರಾಜನಾಯ್ಕ ಭರವಸೆ ನೀಡಿದರು.

ಪಟ್ಟಣದ ವಿವಿಧ ವಾರ್ಡ್‌ಗಳಿಗೆ ₹18 ಕೋಟಿ ವೆಚ್ಚದ ಸಿ.ಸಿ. ರಸ್ತೆ ಕಾಮಗಾರಿಗೆ ಬುಧವಾರ ಚಾಲನೆ ನೀಡಿ, ‘ನಗರಾಭಿವೃದ್ಧಿ ಇಲಾಖೆ ಅನುದಾನದಲ್ಲಿ ಕ್ಷೇತ್ರದಾದ್ಯಂತ ರಸ್ತೆಗಳನ್ನು ಅಭಿವೃದ್ಧಿಪಡಿಸಲಾಗುವುದು’ ಎಂದರು.

‘ಕೊಟ್ಟೂರೇಶ್ವರ ರಥೋತ್ಸವದ ವೇಳೆಗೆ ಪಟ್ಟಣದ ಸಂಪರ್ಕ ಕಲ್ಪಿಸುವ ಎಲ್ಲ ರಸ್ತೆಗಳನ್ನು ಅಭಿವೃದ್ಧಿಪಡಿಸಲಾಗುವುದು ಹಾಗೂ ಚಿರಬಿ, ಉಜ್ಜಯಿನಿ ರಸ್ತೆಗಳ ₹18 ಕೋಟಿ ವೆಚ್ಚದಲ್ಲಿ ಕಾಮಗಾರಿಗೆ ಚಾಲನೆ ನೀಡಲಾಗುವುದು. ತಾಲ್ಲೂಕು ಕೇಂದ್ರಕ್ಕೆ ಅಗತ್ಯವಿರುವ ಪೂರ್ಣಪ್ರಮಾಣದ ಕಚೇರಿಗಳ ಆರಂಭಕ್ಕೆ ಸರ್ಕಾರದ ಮೇಲೆ ಒತ್ತಡ ಹಾಕುವೆ’ ಎಂದು ತಿಳಿಸಿದರು.

ADVERTISEMENT

‘ಕ್ಷೇತ್ರದ ಎಲ್ಲ ಗ್ರಾಮಗಳಲ್ಲೂ ಸಮುದಾಯ ಭವನಗಳ ನಿರ್ಮಾಣ ಮಾಡಲಾಗುವುದು’ ಎಂದೂ ತಿಳಿಸಿದರು.

ಮುಖಂಡರಾದ ಎಂ.ಎಂ.ಜೆ. ಹರ್ಷವರ್ಧನ್, ಜೆಡಿಎಸ್ ಕ್ಷೇತ್ರಾಧ್ಯಕ್ಷ ವೈ.ಮಲ್ಲಿಕಾರ್ಜುನ್, ಎಂ.ಎಂ.ಜೆ. ಶೋಭಿತ್, ಬೂದಿ ಶಿವಕುಮಾರ್, ಪಿ.ಸುಧಾಕರಗೌಡ ಪಾಟೀಲ್, ಎನ್.ಅಪ್ಪಾಜಿ, ಶಿವಾನಂದ ಬಾವಿಕಟ್ಟೆ, ಎಚ್.ಗುರುಬಸವರಾಜ್, ಡಿಶ್ ಮಂಜುನಾಥ್, ಟಿ.ಸಿದ್ದಲಿಂಗಪ್ಪ, ಕೆಂಗನವರ ಸುರೇಶ್ ಕುಮಾರ, ಜವಳಿ ಗಂಗಾಧರ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.