ADVERTISEMENT

ಕೊಟ್ಟೂರು: ದುಡಿಯೋಣ ಬಾ ಅಭಿಯಾನಕ್ಕೆ ಚಾಲನೆ

​ಪ್ರಜಾವಾಣಿ ವಾರ್ತೆ
Published 5 ಮೇ 2025, 15:30 IST
Last Updated 5 ಮೇ 2025, 15:30 IST
ಕೊಟ್ಟೂರು ತಾಲ್ಲೂಕು ಕೆ.ಅಯ್ಯನಹಳ್ಳಿ ಗ್ರಾಮ ಪಂಚಾಯಿತಿ ಅಡಿಯಲ್ಲಿ ಸೋಮವಾರ ನಡೆದ ದುಡಿಯೋಣ ಬಾ ಅಭಿಯಾನಕ್ಕೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಹೇಮಾಕ್ಷಿ ರೇಣುಕಪ್ಪ ಉದ್ಘಾಟಿಸಿದರು
ಕೊಟ್ಟೂರು ತಾಲ್ಲೂಕು ಕೆ.ಅಯ್ಯನಹಳ್ಳಿ ಗ್ರಾಮ ಪಂಚಾಯಿತಿ ಅಡಿಯಲ್ಲಿ ಸೋಮವಾರ ನಡೆದ ದುಡಿಯೋಣ ಬಾ ಅಭಿಯಾನಕ್ಕೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಹೇಮಾಕ್ಷಿ ರೇಣುಕಪ್ಪ ಉದ್ಘಾಟಿಸಿದರು   

ಕೊಟ್ಟೂರು: ಗ್ರಾಮೀಣ ಭಾಗದ ಕೂಲಿಕಾರರ ಕುಟುಂಬಗಳಿಗೆ ವಾರ್ಷಿಕ 100 ದಿನಗಳ ಕಾಲ ನಿರಂತರವಾಗಿ ನರೇಗಾ ಯೋಜನೆಯಡಿ ಕೆಲಸ ನೀಡುವ ಮೂಲಕ ವಲಸೆ ಹೋಗುವುದನ್ನು ತಪ್ಪಿಸಲಾಗುವುದು ಎಂದು ತಾಲ್ಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ಎಚ್.ವಿಜಯಕುಮಾರ್ ಹೇಳಿದರು.

ತಾಲ್ಲೂಕಿನ ಕೆ. ಅಯ್ಯನಹಳ್ಳಿ ಗ್ರಾಮ ಪಂಚಾಯಿತಿಯಿಂದ ಸೋಮವಾರ ಹಮ್ಮಿಕೊಂಡಿದ್ದ ‘ ದುಡಿಯೋಣ ಬಾ’ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.

ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಒಳಗೊಳ್ಳದ ಕುಟುಂಬಗಳನ್ನು ಗುರುತಿಸಿ ಅಕುಶಲ ಕೆಲಸಕ್ಕಾಗಿ ನೋಂದಾಯಿಸುವುದು. ನೋಂದಾಯಿತ ಕೂಲಿಕಾರರಿಗೆ ನಿರಂತರ ಕೆಲಸವನ್ನು ಕಲ್ಪಿಸಿ ಜನರು ವಲಸೆ ಹೋಗುವುದನ್ನು ತಪ್ಪಿಸುವುದು ಈ ಅಭಿಯಾನದ ಮುಖ್ಯ ಉದ್ದೇಶವಾಗಿದೆ ಎಂದರು.

ADVERTISEMENT

ಅಭಿಯಾನದ ಭಾಗವಾಗಿ ಗ್ರಾಮ ಪಂಚಾಯಿತಿ ಸಿಬ್ಬಂದಿ ಕೆಲಸಕ್ಕಾಗಿ ಕೂಲಿಕಾರರಿಂದ ಬೇಡಿಕೆ ಸಂಗ್ರಹಿಸುವುದು ಹಾಗೂ ವಿಶೇಷ ರೋಜಗಾರ್ ದಿನಾಚರಣೆ ಮೂಲಕ ಜನರಿಗೆ ಜಾಗೃತಿ ಮೂಡಿಸುವುದು, ಕೆಲಸಕ್ಕಾಗಿ ಬೇಡಿಕೆ ಸಲ್ಲಿಸಿದ ಕೂಲಿಕಾರರಿಗೆ ಸಕಾಲದಲ್ಲಿ ಕೆಲಸ ಒದಗಿಸುವುದು ಹಾಗೂ ವಿಶೇಷವಾಗಿ ಮಹಿಳೆಯರಿಗೆ ಕೆಲಸ ಒದಗಿಸಲು ಅಗತ್ಯ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳುವ ಮೂಲಕ ಮಹಿಳಾ ಭಾಗವಹಿಸುವಿಕೆ ಹೆಚ್ಚಳಕ್ಕೆ ಆದ್ಯತೆ ನೀಡಲಾಗುವುದು ಎಂದರು.

ಇದೇ ವೇಳೆ, ಆರೋಗ್ಯ ಇಲಾಖೆಯ ಸಹಯೋಗದೊಂದಿಗೆ ಕೂಲಿಕಾರರ ಆರೋಗ್ಯ ತಪಾಸಣೆ ನಡೆಸಲಾಯಿತು.

ಗ್ರಾಮ ಪಂಚಾಯಿತಿ ಅಧ್ಯಕ್ಷೆ ಹೇಮಾಕ್ಷಿ ರೇಣುಕಪ್ಪ ಅಭಿಯಾನ ಉದ್ಘಾಟಿಸಿ ಮಾತನಾಡಿದರು. ಸದಸ್ಯರಾದ ಕೆ.ಕೊಟ್ರೇಶ್, ಸಿದ್ದಲಿಂಗಸ್ವಾಮಿ, ಪಿಡಿಓ ರಾಘವೇಂದ್ರ ಅಣಜಿ, ಐಇಸಿ ಸಂಯೋಜಕರಾದ ಪ್ರಭುಕುಮಾರ್, ಪ್ರವೀಣಕುಮಾರ್, ಕೊಟ್ರೇಶ್  ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.