ADVERTISEMENT

ಬಳ್ಳಾರಿ | ವಿಲೀನ ಹೆಸರಲ್ಲಿ ಶಾಲೆ ಮುಚ್ಚುವ ಹುನ್ನಾರ: ಎಐಡಿಎಸ್‌ಒ ಆರೋಪ

​ಪ್ರಜಾವಾಣಿ ವಾರ್ತೆ
Published 25 ನವೆಂಬರ್ 2025, 5:08 IST
Last Updated 25 ನವೆಂಬರ್ 2025, 5:08 IST
ಕಂಬಳಿ ಮಂಜುನಾಥ್‌ 
ಕಂಬಳಿ ಮಂಜುನಾಥ್‌    

ಬಳ್ಳಾರಿ: ‘ಕೆಪಿಎಸ್ ಮ್ಯಾಗ್ನೆಟ್’ ಯೋಜನೆ ಹೆಸರಲ್ಲಿ ರಾಜ್ಯ ಸರ್ಕಾರವು 40 ಸಾವಿರಕ್ಕೂ ಅಧಿಕ ಸರ್ಕಾರಿ ಶಾಲೆಗಳನ್ನು ಮುಚ್ಚಲು ಮುಂದಾಗಿದೆ’ ಎಂದು ಎಐಡಿಎಸ್‌ಒ ಜಿಲ್ಲಾ ಕಾರ್ಯದರ್ಶಿ ಕಂಬಳಿ ಮಂಜುನಾಥ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಸೋಮವಾರ ಮಾತನಾಡಿದ ಅವರು, ‘ಗ್ರಾಮ ಪಂಚಾಯಿತಿಗೆ ಒಂದರಂತೆ ರಾಜ್ಯದಲ್ಲಿ 6000 ಕೆಪಿಎಸ್ ಮ್ಯಾಗ್ನೆಟ್ ಶಾಲೆಯನ್ನು ಸ್ಥಾಪಿಸುವ ಗುರಿಯನ್ನು ಸರ್ಕಾರವು ಹೊಂದಿದೆ. ಮೊದಲ ಹಂತದಲ್ಲಿ ರಾಜ್ಯದ 800 ಸರಕಾರಿ ಶಾಲೆಗಳನ್ನು ಕೆಪಿಎಸ್ ಮ್ಯಾಗ್ನೆಟ್ ಶಾಲೆಗಳೆಂದು ಗುರುತಿಸಲಾಗಿದೆ. ಆ.15 ರಂದು ಹೊರಡಿಸಿರುವ ಸುತ್ತೋಲೆಯಲ್ಲಿ ಈ ಕುರಿತು ಆದೇಶಿಸಲಾಗಿದೆ’ ಎಂದು ತಿಳಿಸಿದರು.

‘ರಾಜ್ಯದಲ್ಲಿ ಒಂದೇ ಒಂದು ಶಾಲೆಯನ್ನು ಮುಚ್ಚುವುದಿಲ್ಲ ಎಂಬ ಸರ್ಕಾರದ ಸ್ಪಷ್ಟನೆ ಸತ್ಯಕ್ಕೆ ದೂರವಾಗಿದೆ. ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಯಾವ ಶಾಲೆಯನ್ನು ಮ್ಯಾಗ್ನೆಟ್ ಶಾಲೆಯನ್ನಾಗಿ ಮಾಡಬೇಕು. ಆ ಶಾಲೆಗೆ ಯಾವ ಯಾವ ಶಾಲೆಗಳನ್ನು ಸೇರಿಸಬೇಕು ಎಂಬುದರ ಪೂರ್ಣ ಪಟ್ಟಿಯನ್ನು ಈಗಾಗಲೇ ಸಿದ್ಧಗೊಳಿಸಲಾಗಿದೆ. ಶಾಲೆಗಳ ಅಭಿವೃದ್ಧಿಯ ಹೆಸರಲ್ಲಿ ರಾಜ್ಯದ ಜನತೆಯನ್ನು ವಂಚಿಸಿ ಬಡ ಮಕ್ಕಳಿಂದ ಶಾಶ್ವತವಾಗಿ ಶಿಕ್ಷಣವನ್ನು ಕಸಿದುಕೊಳ್ಳುವ ಸರ್ಕಾರದ ಘೋರ ಹುನ್ನಾರ ಇದಾಗಿದೆ’ ಎಂದು ದೂರಿದರು.

ADVERTISEMENT

ಎಐಡಿಎಸ್‌ಒ ಜಿಲ್ಲಾಧ್ಯಕ್ಷ ಈರಣ್ಣ, ಖಜಾಂಚಿ ಅನುಪಮಾ ಮತ್ತು ಸದಸ್ಯರಾದ ತಿಪ್ಪೇಸ್ವಾಮಿ, ಎ.ಕೆ ಮಂಜುನಾಥ, ಸೋಮಶೇಖರ್ ಸೇರಿದಂತೆ ಇತರರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.