ಬಳ್ಳಾರಿ: ಆಗಸ್ಟ್ 15ರ ಸ್ವಾತಂತ್ರ್ಯೋತ್ಸವದ ದಿನ ಬಳ್ಳಾರಿ ಜಿಲ್ಲಾ ಕೇಂದ್ರದಲ್ಲಿ ಧ್ವಜಾರೋಹಣ ನೆರವೇರಿಸಲು ಸರ್ಕಾರವು ಕಂದಾಯ ಸಚಿವ ಕೃಷ್ಣಬೈರೇಗೌಡ ಅವರನ್ನು ನಿಯೋಜಿಸಿ, ಆದೇಶಿಸಿದೆ.
ಧ್ವಜಾರೋಹಣ ನೆರವೇರಿಸುವ ಸಚಿವರ ಪಟ್ಟಿಯನ್ನು ರಾಜ್ಯ ಸರ್ಕಾರ ಮಂಗಳವಾರ ಬಿಡುಗಡೆ ಮಾಡಿದೆ. ಅದರಲ್ಲಿ ಈ ಬಾರಿಯೂ ಕೃಷ್ಣ ಬೈರೇಗೌಡ ಅವರಿಗೇ ಸರ್ಕಾರ ಅವಕಾಶ ನೀಡಿದೆ.
ಕೃಷ್ಣ ಬೈರೇಗೌಡ ಅವರು ಈ ಹಿಂದಿನ ವರ್ಷದ ಸ್ವಾತಂತ್ರ್ಯೋತ್ಸವ ಮತ್ತು ಕನ್ನಡ ರಾಜ್ಯೋತ್ಸವಕ್ಕೂ ಧ್ವಜಾರೋಹಣ ನೆರವೇರಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.