ADVERTISEMENT

ಕೃಷ್ಣನಿಗೆ ಪೂಜೆ ಸಲ್ಲಿಸಿದ ಸಚಿವ ಆನಂದ್‌ ಸಿಂಗ್‌

​ಪ್ರಜಾವಾಣಿ ವಾರ್ತೆ
Published 11 ಆಗಸ್ಟ್ 2020, 8:16 IST
Last Updated 11 ಆಗಸ್ಟ್ 2020, 8:16 IST
   

ಹೊಸಪೇಟೆ: ಕೋವಿಡ್‌–19ನಿಂದ ಗುಣಮುಖರಾಗಿರುವ ಅರಣ್ಯ ಸಚಿವ ಆನಂದ್‌ ಸಿಂಗ್‌ ಅವರು ಮಂಗಳವಾರ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಇಲ್ಲಿನ ಅವರ ಬಂಗ್ಲೆಯ ಆವರಣದಲ್ಲಿರುವ ಬೃಹತ್‌ ಕೃಷ್ಣನ ಮೂರ್ತಿಗೆ ವಿಶೇಷ ಪೂಜೆ ನೆರವೇರಿಸಿದರು.

ಕಪ್ಪು ಶಿಲೆಯಲ್ಲಿ ಕೆತ್ತಿರುವ ಮೂರ್ತಿಗೆ ಅವರ ಮಗ ಸಿದ್ದಾರ್ಥ ಸಿಂಗ್‌ ಹಾಲಿನ ಅಭಿಷೇಕ ಮಾಡಿದರೆ, ಆನಂದ್‌ ಸಿಂಗ್‌ ಕಾಯಿ ಒಡೆದು, ಆರತಿ ಬೆಳಗಿ ಪೂಜೆ ಸಲ್ಲಿಸಿದರು. ಅವರ ಕುಟುಂಬ ಸದಸ್ಯರಷ್ಟೇ ಪೂಜೆಯಲ್ಲಿ ಭಾಗವಹಿಸಿದ್ದರು.

ಕೋವಿಡ್‌ ದೃಢಪಟ್ಟ ಬಳಿಕ ಆನಂದ್‌ ಸಿಂಗ್‌ ಅವರು ಮನೆಯಲ್ಲಿದ್ದುಕೊಂಡೇ ಚಿಕಿತ್ಸೆ ಪಡೆದುಕೊಂಡಿದ್ದರು. ಕೋವಿಡ್‌ನಿಂದ ಗುಣಮುಖರಾದರೂ ಅವರ ಕ್ವಾರಂಟೈನ್‌ ಅವಧಿ ಮುಗಿದಿಲ್ಲ. ಹಾಗಾಗಿ ಸಾರ್ವಜನಿಕ, ಸಭೆ ಸಮಾರಂಭಗಳಲ್ಲಿ ಪಾಲ್ಗೊಳ್ಳುತ್ತಿಲ್ಲ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.