ADVERTISEMENT

ಮುಸ್ಲಿಮರ ಮೀಸಲಾತಿ ರದ್ದತಿಗೆ ವಿರೋಧ

​ಪ್ರಜಾವಾಣಿ ವಾರ್ತೆ
Published 28 ಮಾರ್ಚ್ 2023, 14:08 IST
Last Updated 28 ಮಾರ್ಚ್ 2023, 14:08 IST
ಕೆಆರ್‌ಎಸ್‌ ಪಕ್ಷದ ಕಾರ್ಯಕರ್ತರು ಹೊಸಪೇಟೆ ಜಿಲ್ಲಾಧಿಕಾರಿ ಕಚೇರಿ ಎದುರು ಮಂಗಳವಾರ ಸಾಂಕೇತಿಕವಾಗಿ ಪ್ರತಿಭಟನೆ ನಡೆಸಿದರು
ಕೆಆರ್‌ಎಸ್‌ ಪಕ್ಷದ ಕಾರ್ಯಕರ್ತರು ಹೊಸಪೇಟೆ ಜಿಲ್ಲಾಧಿಕಾರಿ ಕಚೇರಿ ಎದುರು ಮಂಗಳವಾರ ಸಾಂಕೇತಿಕವಾಗಿ ಪ್ರತಿಭಟನೆ ನಡೆಸಿದರು   

ಹೊಸಪೇಟೆ (ವಿಜಯನಗರ): ಮುಸ್ಲಿಂ ಸಮಾಜಕ್ಕೆ ನೀಡಿದ್ದ ಪ್ರವರ್ಗ–2ಬಿ ಮೀಸಲಾತಿ ರದ್ದುಗೊಳಿಸಿರುವ ರಾಜ್ಯ ಸರ್ಕಾರದ ಕ್ರಮ ಸರಿಯಲ್ಲ ಎಂದು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ (ಕೆಆರ್‌ಎಸ್‌) ತಿಳಿಸಿದೆ.

ಪಕ್ಷದ ಮುಖಂಡರು ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಮಂಗಳವಾರ ಸಾಂಕೇತಿಕ ಧರಣಿ ನಡೆಸಿ, ರಾಷ್ಟ್ರಪತಿಯವರ ಹೆಸರಿಗೆ ಬರೆದ ಮನವಿ ಪತ್ರ ಸಲ್ಲಿಸಿ ಹಕ್ಕೊತ್ತಾಯ ಮಾಡಿದರು.

ದೇಶದಲ್ಲಿ ಶೇ 15ರಷ್ಟು ಮುಸ್ಲಿಮರಿದ್ದಾರೆ. ಆರ್ಥಿಕ, ಶೈಕ್ಷಣಿಕ ಹಾಗೂ ರಾಜಕೀಯವಾಗಿ ಹಿಂದುಳಿದಿದ್ದಾರೆ. ಹೀಗಿರುವಾಗ 2ಬಿ ಮೀಸಲು ರದ್ದುಪಡಿಸಿದ ಕ್ರಮ ಸರಿಯಲ್ಲ. ಇದರಿಂದ ಸಮಾಜದವರು ಮತ್ತಷ್ಟು ಹಿಂದುಳಿಯಬಹುದು. ಅನ್ಯಾಯ ಮಾಡಿದಂತಾಗುತ್ತದೆ. ಕೂಡಲೇ ಸರ್ಕಾರ ತನ್ನ ಆದೇಶ ಹಿಂಪಡೆಯಬೇಕೆಂದು ಆಗ್ರಹಿಸಿದರು.

ADVERTISEMENT

ಬಡ ಮುಸ್ಲಿಮರ ಸಮಗ್ರ ಕಲ್ಯಾಣಕ್ಕಾಗಿ ಸರ್ಕಾರ ಯೋಜನೆ ರೂಪಿಸಬೇಕು. ಅದರಲ್ಲೂ ಮಹಿಳಾ ಸ್ವಸಹಾಯ ಗುಂಪುಗಳ ರಚನೆಗೆ ಪ್ರೋತ್ಸಾಹಿಸಬೇಕು. ಕೌಶಲ ತರಬೇತಿ ನೀಡಬೇಕು. ರಕ್ಷಣಾ ಪಡೆಗಳಲ್ಲಿ ಮುಸ್ಲಿಮರಿಗೆ ಆದ್ಯತೆ ನೀಡಬೇಕೆಂದು ಒತ್ತಾಯಿಸಿದರು. ಪಕ್ಷದ ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಟಿ. ನಜೀರ್‌ ಇತರರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.