ADVERTISEMENT

ಕೂಡ್ಲಿಗಿ ಮಾದರಿ ಕ್ಷೇತ್ರವನ್ನಾಗಿಸಲು ಶ್ರಮಿಸುವೆ: ಶಾಸಕ ಶ್ರೀನಿವಾಸ್

​ಪ್ರಜಾವಾಣಿ ವಾರ್ತೆ
Published 19 ಅಕ್ಟೋಬರ್ 2025, 7:28 IST
Last Updated 19 ಅಕ್ಟೋಬರ್ 2025, 7:28 IST
18ಕೆಟಿಆರ್1 – ಕೊಟ್ಟೂರು ತಾಲ್ಲೂಕು ಕೂಡ್ಲಿಗಿ ವಿಧಾನಸಭಾ ಕ್ಷೇತ್ರಕ್ಕೊಳಪಡುವ ನಿಂಬಳಗೆರೆ ಗ್ರಾಮದಲ್ಲಿ ಶನಿವಾರ ಏರ್ಪಡಿಸಿದ್ದ ‘ ಮನೆ ಮನೆಗೆ ಶಾಸಕರು ಮನೆ ಬಾಗಿಲಿಗೆ ಸರ್ಕಾರ ’ ಕಾರ್ಯಕ್ರಮದಲ್ಲಿ ಶಾಸಕ ಡಾ.ಎನ್.ಟಿ.ಶ್ರೀನಿವಾಸ್ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು.
18ಕೆಟಿಆರ್1 – ಕೊಟ್ಟೂರು ತಾಲ್ಲೂಕು ಕೂಡ್ಲಿಗಿ ವಿಧಾನಸಭಾ ಕ್ಷೇತ್ರಕ್ಕೊಳಪಡುವ ನಿಂಬಳಗೆರೆ ಗ್ರಾಮದಲ್ಲಿ ಶನಿವಾರ ಏರ್ಪಡಿಸಿದ್ದ ‘ ಮನೆ ಮನೆಗೆ ಶಾಸಕರು ಮನೆ ಬಾಗಿಲಿಗೆ ಸರ್ಕಾರ ’ ಕಾರ್ಯಕ್ರಮದಲ್ಲಿ ಶಾಸಕ ಡಾ.ಎನ್.ಟಿ.ಶ್ರೀನಿವಾಸ್ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು.   

ಕೊಟ್ಟೂರು: ಸಾರ್ವಜನಿಕರು ಕಚೇರಿ ಕೆಲಸ ಕಾರ್ಯಗಳಿಗೋಸ್ಕರ ಅನಗತ್ಯವಾಗಿ ಅಲೆದಾಡಬಾರದು ಎಂಬ ಸದುದ್ದೇಶದಿಂದ ಸರ್ಕಾರವನ್ನು ಜನರ ಮನೆ ಬಾಗಿಲಿಗೆ ಕೊಂಡೊಯ್ದು ಅವರ ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ಕಲ್ಪಿಸುವುದು ನಮ್ಮ ಗುರಿಯಾಗಿದೆ ಎಂದು ಕೂಡ್ಲಿಗಿ ಕ್ಷೇತ್ರದ ಶಾಸಕ ಡಾ.ಎನ್.ಟಿ.ಶ್ರೀನಿವಾಸ್ ಹೇಳಿದರು.

ತಾಲ್ಲೂಕಿನ ಕೂಡ್ಲಿಗಿ ವಿಧಾನ ಸಭಾ ಕ್ಷೇತ್ರಕ್ಕೊಳಪಡುವ ನಿಂಬಳಗೆರೆ ಗ್ರಾಮದಲ್ಲಿ ಶನಿವಾರ ಆಯೋಜಿಸಿದ್ದ ‘ಮನೆ ಮನೆಗೆ ಶಾಸಕರು ಮನೆ ಬಾಗಿಲಿಗೆ ಸರ್ಕಾರ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ತಾಲ್ಲೂಕು ಆಡಳಿತಗಳು ಕೇವಲ ತಾಲ್ಲೂಕು ಕೇಂದ್ರಗಳಿಗೆ ಸೀಮಿತಗೊಳ್ಳದೇ ಗ್ರಾಮಾಂತರ ಪ್ರದೇಶಗಳಿಗೂ ವಿಸ್ತರಿಸಿದಾಗ ಮಾತ್ರ ಕ್ಷೇತ್ರದ ಕಟ್ಟ ಕಡೆಯ ವ್ಯಕ್ತಿಗೂ ಸರ್ಕಾರದ ಸೌಲಭ್ಯಗಳನ್ನು ಪಡೆಯಲು ಸಹಕಾರಿಯಾಗುತ್ತದೆ ಎಂಬ ಚಿಂತನೆ ನಮ್ಮದಾಗಿದೆ ಎಂದರು.

ADVERTISEMENT

ಕೂಡ್ಲಿಗಿ ವಿಧಾನ ಸಭಾ ಕ್ಷೇತ್ರವು ಅತ್ಯಂತ ಹಿಂದುಳಿದ ಪ್ರದೇಶ ಎಂಬ ಹಣೆಪಟ್ಟಿಯನ್ನು ಹೊಂದಿದ್ದು ಇದನ್ನು ಕಳಚಲು ಕ್ಷೇತ್ರದಾದ್ಯಂತ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವ ಮೂಲಕ ಮಾದರಿ ಕ್ಷೇತ್ರವನ್ನಾಗಿಸಲು ಶ್ರಮಿಸುವೆ ಎಂಬ ಭರವಸೆ ಮಾತುಗಳನ್ನಾಡಿದರು.

ಕೂಡ್ಲಿಗಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಗುರುಸಿದ್ದನಗೌಡ, ಗ್ರಾಮ ಪಂಚಾಯ್ತಿ ಅಧ್ಯಕ್ಷ ಎಸ್.ಶ್ರೀಕಾಂತ್,ಉಪಾಧ್ಯಕ್ಷೆ ಮಂಗಳಮ್ಮ , ಮುಖಂಡರಾದ ಕೆ.ಎಂ.ಶಶಿಧರ್, ಸಾವಜ್ಜಿ ರಾಜೇಂದ್ರ ಪ್ರಸಾದ್, ಎಚ್.ಕೆ.ಕಲ್ಲೇಶಣ್ಣ, ಜಿಲಾನ್ ಭಾಷಾ, ಮಹಾಂತೇಶ್, ವಿಜಯ, ಮಲ್ಲಿಕಾರ್ಜುನ್, ರಾಜಶೇಖರ್,ಶರಣಪ್ಪ, ತಹಶೀಲ್ದಾರ್ ಜಿ.ಕೆ.ಅಮರೀಶ್, ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಬಿ.ಆನಂದಕುಮಾರ್, ವಿವಿಧ ಇಲಾಖಾಧಿಕಾರಿಗಳು, ಗ್ರಾಮಸ್ಥರು ಪಾಲ್ಗೊಂಡಿದ್ದರು.

ವಿವಿಧ ಇಲಾಖೆಗಳಿಗೆ ಸಂಬಂಧಿಸಿದಂತೆ ಒಟ್ಟು 100 ಅರ್ಜಿಗಳು ಬಂದಿದ್ದು ಬಹುತೇಕ ಅರ್ಜಿಗಳಿಗೆ ಶಾಸಕರು ಸ್ಥಳದಲ್ಲಿಯೇ ಪರಿಹಾರ ಕಲ್ಪಿಸಿದರು. ಉಳಿದ ಅರ್ಜಿಗಳಿಗೆ ತಾಲ್ಲೂಕು ಆಡಳಿತ ಕೂಡಲೇ ಪರಿಹಾರ ಕಲ್ಪಿಸಿಕೊಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.