ಕೂಡ್ಲಿಗಿ: ಸೀಮಂತ ಮಹಿಳೆಯ ಜೀವನದ ಅತ್ಯಂತ ಮಹತ್ತರ ಘಟ್ಟ ಎಂದು ಶಾಸಕ ಡಾ. ಶ್ರೀನಿವಾಸ್ ಎನ್.ಟಿ. ಅಭಿಪ್ರಾಯಪಟ್ಟರು.
ತಮ್ಮ ಸ್ವಗ್ರಾಮ ತಾಲ್ಲೂಕಿನ ನರಸಿಂಹಗಿರಿಯಲ್ಲಿ ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ಶಾಸಕರ ಕುಟುಂಬದಿಂದ ಗುರುವಾರ ಹಮ್ಮಿಕೊಂಡಿದ್ದ ಗರ್ಭಿಣಿಯರಿಗೆ ಸೀಮಂತ ಹಾಗೂ ಆಶಾ ಕಾರ್ಯಕರ್ತೆಯರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
‘ಗರ್ಭಿಣಿಯರು ಪೌಷ್ಟಿಕ, ಸಮತೋಲಿತ ಆಹಾರ ಸೇವನೆ ಮಾಡಿ ಆರೋಗ್ಯ ಕಾಪಾಡಿಕೊಳ್ಳಬೇಕು. ಗರ್ಭಿಣಿ ಹಾಗೂ ಮಕ್ಕಳು ದೇಶದ ಸಂಪತ್ತು’ ಎಂದರು.
ಗುಡೇಕೋಟೆ ಹೋಬಳಿಯ 350ಕ್ಕೂ ಹೆಚ್ಚು ಗರ್ಭಿಣಿಯರಿಗೆ ಸೀಮಂತ ನೆರವೇರಿಸಿ, ತಾಲ್ಲೂಕಿನ 160ಕ್ಕೂ ಹೆಚ್ಚು ಆಶಾ ಕಾರ್ಯಕರ್ತೆಯರಿಗೆ ಸನ್ಮಾನ ಮಾಡಲಾಯಿತು.
ಶಾಸಕರ ತಾಯಿ ಎನ್.ಟಿ. ಓಬಮ್ಮ, ಕಾಂಗ್ರೆಸ್ ಮುಖಂಡ ಎನ್.ಟಿ. ತಮ್ಮಣ್ಣ, ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಎಸ್.ಪಿ. ಪ್ರದೀಪ್ ಕುಮಾರ್, ಉಪಾನ್ಯಾಸಕಿ ಗಂಗಮ್ಮ, ಎಸ್. ವೆಂಕಟೇಶ್, ಮಂಜುನಾಥ, ಸ್ಥಳೀಯ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸದಸ್ಯರು ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.