ADVERTISEMENT

ಸಂಡೂರು: ಕುರೆಕುಪ್ಪ ಪುರಸಭೆಗೆ ಸೂರ್ಯನಾರಾಯಣ ಅಧ್ಯಕ್ಷ

​ಪ್ರಜಾವಾಣಿ ವಾರ್ತೆ
Published 17 ಜನವರಿ 2026, 5:53 IST
Last Updated 17 ಜನವರಿ 2026, 5:53 IST
ಸಂಡೂರು ತಾಲ್ಲೂಕಿನ ಕುರೆಕುಪ್ಪ ಪುರಸಭೆಗೆ ಆಯ್ಕೆಯಾದ ಅಧ್ಯಕ್ಷ, ಉಪಾಧ್ಯಕ್ಷರನ್ನು ಗಣ್ಯರು ಸನ್ಮಾನಿಸಿದರು
ಸಂಡೂರು ತಾಲ್ಲೂಕಿನ ಕುರೆಕುಪ್ಪ ಪುರಸಭೆಗೆ ಆಯ್ಕೆಯಾದ ಅಧ್ಯಕ್ಷ, ಉಪಾಧ್ಯಕ್ಷರನ್ನು ಗಣ್ಯರು ಸನ್ಮಾನಿಸಿದರು   

ಸಂಡೂರು: ತಾಲ್ಲೂಕಿನ ಕುರೆಕುಪ್ಪ ಪುರಸಭೆಗೆ ಎರಡನೇ ಅವಧಿಗೆ ಅಧ್ಯಕ್ಷರಾಗಿ 18ನೇ ವಾರ್ಡ್‌ನ ಸೂರ್ಯನಾರಾಯಣ, ಉಪಾಧ್ಯಕ್ಷರಾಗಿ 4ನೇ ವಾರ್ಡ್‌ನ ಡಿ. ರೇಖಾ ಶುಕ್ರವಾರ ಅವಿರೋಧವಾಗಿ ಆಯ್ಕೆಯಾದರು.

ಅಧ್ಯಕ್ಷರ ಸ್ಥಾನವು ಸಾಮಾನ್ಯ ವರ್ಗಕ್ಕೆ, ಉಪಾಧ್ಯಕ್ಷರ ಸ್ಥಾನವು ಪರಿಶಿಷ್ಟ ಪಂಗಡಕ್ಕೆ ಮೀಸಲಾಗಿತ್ತು. ಎರಡು ಸ್ಥಾನಗಳಿಗೆ ತಲಾ ಒಬ್ಬರು ಮಾತ್ರ ನಾಮಪತ್ರ ಸಲ್ಲಿಸಿದ ಕಾರಣ ಚುನಾವಣಾ ಅಧಿಕಾರಿ ತಹಶೀಲ್ದಾರ್ ಅನಿಲ್ ಕುಮಾರ್ ಜಿ. ಅವರು ನಾಮಪತ್ರ ಸಲ್ಲಿಸಿದ ಈ ಇಬ್ಬರು ಅಭ್ಯರ್ಥಿಗಳನ್ನು ಅವರಿಬ್ಬರ ಅವಿರೋಧ ಆಯ್ಕೆಯನ್ನು ಘೋಷಿಸಿದರು.

ಸಂಸದ ಇ. ತುಕಾರಾಂ, ಶಾಸಕಿ ಅನ್ನಪೂರ್ಣಾ ತುಕಾರಾಂ ಅವರು ನೂತನವಾಗಿ ಆಯ್ಕೆಯಾದ ಅಧ್ಯಕ್ಷ–ಉಪಾಧ್ಯಕ್ಷರನ್ನು ಸನ್ಮಾನಿಸಿದರು. ತೋರಣಗಲ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಿ. ಏಕಾಂರಪ್ಪ, ಉಪಾಧ್ಯಕ್ಷ ನೂರ ಮೊಹಮ್ಮದ್, ಕಾರ್ಯದರ್ಶಿ ಯು. ಪಂಪಪಾತಿ, ಪುರಸಭೆಯ ಮುಖ್ಯ ಅಧಿಕಾರಿ ಅರುಣ್ ಕುಮಾರ್, ಮುಖಂಡರಾದ ಜಿ. ಚಿನ್ನಬಸಪ್ಪ ಹಾಜರಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.