ADVERTISEMENT

ಕುರುಗೋಡು | ಇಂದಿರಾ ಕ್ಯಾಂಟೀನ್ ಉದ್ಘಾಟನೆ ವಿಳಂಬ

​ಪ್ರಜಾವಾಣಿ ವಾರ್ತೆ
Published 7 ಮೇ 2025, 5:22 IST
Last Updated 7 ಮೇ 2025, 5:22 IST
   

ಕುರುಗೋಡು: ಕಟ್ಟಡ ನಿರ್ಮಾಣ ಕಾಮಗಾರಿ ಪೂರ್ಣಗೊಂಡರು ಉದ್ಘಾಟನೆ ಭಾಗ್ಯ ಕಾಣದ ಇಂದಿರಾ ಕ್ಯಾಂಟೀನ್‌ ಕಟ್ಟಡ ಪಾಳುಬಿದ್ದಿದೆ.

ಸಕಾಲಕ್ಕೆ ಉದ್ಘಾಟನೆಗೊಳ್ಳದ ಪರಿಣಾಮ ಕಡಿಮೆ ಬೆಲೆಯಲ್ಲಿ ಬಡವರ ಹೊಟ್ಟೆ ತುಂಬಿಸುವ ರಾಜ್ಯ ಸರ್ಕಾರದ ಉದ್ದೇಶ ಮರೀಚಿಕೆಯಾಗಿದೆ.

ಇಲ್ಲಿನ ಹೊಸ ಬಸ್‌ನಿಲ್ದಾಣದ ಬಯಲು ಸ್ಥಳದಲ್ಲಿ 2024ರ ಮಾರ್ಚ್ ತಿಂಗಳಲ್ಲಿ ಇಂದಿರಾ ಕ್ಯಾಂಟೀನ್ ನಿರ್ಮಾಣಕ್ಕೆ ಗುತ್ತಿಗೆದಾರರು ಮುಂದಾಗಿದ್ದರು.

ADVERTISEMENT

ಸ್ಥಳ ಆಯ್ಕೆ ಕುರಿತು ಗೊಂದಲ ಉಂಟಾದ ಹಿನ್ನೆಲೆಯಲ್ಲಿ ನಿರ್ಮಾಣ ಸ್ಥಗಿತಗೊಂಡಿತ್ತು. ಆರು ತಿಂಗಳ ಹಿಂದೆ ಕಟ್ಟಡದ ಸಿವಿಲ್ ನಿರ್ಮಾಣ ಕಾಮಗಾರಿ ಪೂರ್ಣಗೊಂಡಿದೆ. ಕಟ್ಟಡಕ್ಕೆ ಕಿಟಕಿ, ಬಾಗಿಲು ಅಳವಡಿಸದ ಕಾರಣ ಕಿಡಿಗೇಡಿಗಳು ಮದ್ಯಸೇವನೆಯ ಕೆಂದ್ರವಾಗಿ ಮಾಡಿಕೊಂಡಿದ್ದರು. ಕಟ್ಟಡ ದಲ್ಲಿ ಮದ್ಯದ ಬಾಟಲಿಗಳು ಬಿದ್ದಿದ್ದವು. ಇನ್ನು ಕೆಲವು ಜನರು ಮಲಮೂತ್ರ ವಿಸರ್ಜನೆಗೆ ಬಳಕೆಮಾಡು ತ್ತಿರುವುದರಿಂದ ಕಟ್ಟಡದ ಸುತ್ತಮುತ್ತ ದುರ್ವಾಸನೆ ಬೀರುತ್ತಿತ್ತು.

ಇತ್ತೀಚೆಗೆ ಗುತ್ತಿಗೆ ದಾರರು ಇಂದಿರಾ ಕ್ಯಾಂಟಿನ್ ಕಟ್ಟಡಕ್ಕೆ ಕಿಟಕಿ, ಬಾಗಿಲು ಅಳವಡಿಸಿದ್ದಾರೆ. ಆದರೆ ಉದ್ಘಾಟನೆ ಭಾಗ್ಯ ಕಂಡಿಲ್ಲ. ಕಡಿಮೆ ಬೆಲೆಯಲ್ಲಿ ಬಡವರ ಹೊಟ್ಟೆ ತುಂಬಿ ಡಬೇಕಾದ ಇಂದಿರಾ ಕ್ಯಾಂಟಿನ್ ಉದ್ಘಾ ಟನೆಯಾಗದ ಬಗ್ಗೆ ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈಕುರಿತು ಪ್ರತಿಕ್ರಿಯಿಸಿದ ಪುರಸಭೆ ಅಧ್ಯಕ್ಷ ಟಿ.ಶೇಖಣ್ಣ, ಇಂದಿರಾ ಕ್ಯಾಂಟಿನ್ ಕಟ್ಟಡ ನಿರ್ಮಾಣ ಪೂರ್ಣಗೊಳಿಸಿ ಗುತ್ತಿ ಗೆದಾರರು ಪುರಸಭೆಗೆ ಹಸ್ತಾಂತರಿಸಿಲ್ಲ.

ಸಿಸಿ ಕ್ಯಾಮೆರಾ, ಕುಡಿಯುವ ನೀರು ಮತ್ತು ನೈರ್ಮಲ್ಯ ನಿರ್ವಹಣೆಗೆ ₹10 ಲಕ್ಷ ಅನುದಾನ ಮೀಸಲಿಡಲಾಗಿದೆ. ಕಟ್ಟಡ ದುರ್ಬಳಕೆಯಾಗದಂತೆ ಮತ್ತು ಸ್ವಚ್ಛತೆ ಕಾಪಾಡುವಂತೆ ಪುರಸಭೆ ಸ್ವಚ್ಛತಾ ಸಿಬ್ಬಂದಿಗೆ ಸೂಚಿಸಲಾಗಿದೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.