ಕುರುಗೋಡು: ಸಮೀಪದ ಸಿರಿಗೇರಿ ಗ್ರಾಮದ ಹುಚ್ಚೇಶ್ವರ ನಗರದಿಂದ ಕುರುಗೋಡು ಕಡೆಗೆ ಆಟೊದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಪಡಿತರ ಅಕ್ಕಿಯನ್ನು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧಿಕಾರಿಗಳು ಮತ್ತು ಪೊಲೀಸರು ದಾಳಿ ನಡೆಸಿ ವಶಪಡಿಸಿಕೊಂಡಿರುವ ಘಟನೆ ಈಚೆಗೆ ಜರುಗಿದೆ.
ಖಚಿತ ಮಾಹಿತಿ ಪಡೆದ ಆಹಾರ ನಿರೀಕ್ಷಕ ಜಿ. ಮಹಾರುದ್ರಗೌಡ, ಪಿಎಸ್‌ಐ ಸದ್ದಾಂ ಹುಸೇನ್ ಮತ್ತು ಪೊಲೀಸ್ ಸಿಬ್ಬಂದಿ ₹ 69 ಸಾವಿರ ಮೌಲ್ಯದ 60 ಮೂಟೆ ಪಡಿತರ ಅಕ್ಕಿಯನ್ನು ವಶಪಡಿಸಿಕೊಂಡಿದ್ದಾರೆ. ಈ ಕುರಿತು ಸಿರಿಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.