
ಕುರುಗೋಡು: ಸಾವಯವ ಕೃಷಿ ಪದ್ಧತಿಯಲ್ಲಿ ಮೆಣಸಿನಕಾಯಿ ಬೆಳೆದು ಅಧಿಕ ಇಳುವರಿ ಮತ್ತು ಹೆಚ್ಚು ಲಾಭಗಳಿಸಬಹುದು ಎಂದು ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕ ಶಶಿಕಾಂತ್ ಕೋಟಿ ಮನೆ ಸಲಹೆ ನೀಡಿದರು.
ತಾಲ್ಲೂಕಿನ ಮಾರುತಿ ಕ್ಯಾಂಪ್‍ನಲ್ಲಿ ತೋಟಗಾರಿಕೆ ಇಲಾಖೆ ಮತ್ತು ಹಗರಿ ಕೃಷಿ ವಿಜ್ಞಾನ ಕೇಂದ್ರ ಸಂಯುಕ್ತವಾಗಿ ಮಂಗಳವಾರ ಆಯೋಜಿಸಿದ್ದ ಮೆಣಸಿನಕಾಯಿ ಬೆಳೆ ಕ್ಷೇತ್ರೋತ್ಸವದಲ್ಲಿ ಅವರು ಮಾತನಾಡಿದರು.
ಕೃಷಿ ವಿಜ್ಞಾನಿ ಪಾಲಯ್ಯ, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಜೆ,ಶಂಕ್ರಪ್, ರವಿ, ಗೋವಿಂದಪ್ಪ ಮಾತನಾಡಿದರು.
ಗ್ರಾಮ ಪಂಚಾಯಿತಿ ಸದಸ್ಯ ಇಬ್ರಾಹಿಂ ಸಾಬ್, ರೈತರಾದ ವೀರಭದ್ರ, ಆಂಜನೇಯ, ಹನುಮಂತ ರಾವ್, ಸೀತಾರಾಮ್, ಮಲ್ಲನಗೌಡ ಮತ್ತು ಬಲರಾಮ್, ಸಹಾಯಕ ತೋಟಗಾರಿಕೆ ಅಧಿಕಾರಿ ರಾಘವೇಂದ್ರ ಮತ್ತು ಪ್ರವೀಣ್ ಕುಮಾರ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.