ಕುರುಗೋಡು: ಇಲ್ಲಿನ ಸರ್ಕಾರಿ ಪ್ರಥಮದರ್ಜೆ ಕಾಲೇಜಿಗೆ ಅತಿಥಿ ಉಪನ್ಯಾಸಕರನ್ನು ನೇಮಿಸಿ ವಿದ್ಯಾರ್ಥಿಗಳು ಎದುರಿಸುತ್ತಿರುವ ಗೊಂದಲಕ್ಕೆ ತೆರೆ ಎಳೆಯುವಂತೆ ಒತ್ತಾಯಿಸಿ ಅಖಿತ ಭಾರತ ಪ್ರಜಾಸತ್ತಾತ್ಮಕ ವಿದ್ಯಾರ್ಥಿ ಒಕ್ಕೂಟದ (ಎಐಡಿಎಸ್‌ಒ) ನೇತೃತ್ವದಲ್ಲಿ ವಿದ್ಯಾರ್ಥಿಗಳು ಬುಧವಾರ ಪ್ರತಿಭಟನೆ ನಡೆಸಿದರು.
ಎಐಡಿಎಸ್‌ಒ ಸಂಘಟನೆ ಜಿಲ್ಲಾ ಕಾರ್ಯದರ್ಶಿ ಕಂಬಳಿ ಮಂಜುನಾಥ ಮಾತನಾಡಿ, ಪದವಿ ತರಗತಿಗಳು ಆರಂಭಗೊಂಡು ತಿಂಗಳು ಕಳೆದರೂ ಕಾಲೇಜಿಗೆ ಅತಿಥಿ ಉಪನ್ಯಾಸಕರನ್ನು ನೇಮಿಸಿಲ್ಲ. ಪರಿಣಾಮ ತರಗತಿಗಳು ಸರಿಯಾಗಿ ನಡೆಯದೆ ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಹಿನ್ನಡೆ ಅನುಭವಿಸುತ್ತಿದಾರೆ ಎಂದು ಕಳವಳ ವ್ಯಕ್ತಪಡಿಸಿದರು.
ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ರಾಜ್ಯ ಸರ್ಕಾರ ಸ್ಪಷ್ಟ ನಿಲುವು ತಾಳಿ. ಶೈಕ್ಷಣಿಕ ಚಟುವಟಿಕೆಗಳು ಸರಾಗವಾಗಿ ನಡೆಯಲು ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಮುಖ್ಯಮಂತ್ರಿಗಳಿಗೆ ಬರೆದ ಮನವಿಯನ್ನು ಕಾಲೇಜಿನ ಪ್ರಾಚಾರ್ಯರಾದ ಶಾಂತಲಾ ಅವರಿಗೆ ಸಲ್ಲಿಸಿದರು.
ವಿದ್ಯಾರ್ಥಿಗಳಾದ ತಿಪ್ಪೇಸ್ವಾಮಿ, ಕಾರ್ತಿಕ್, ಮಂಜುನಾಥ, ಕಾಮಾಕ್ಷಿ, ಲಕ್ಷಿö್ಮ ಮೋಹನ್ ಮತ್ತು ರಾಜು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.