ADVERTISEMENT

ಬಾಲಕಾರ್ಮಿಕ ಪದ್ಧತಿ ವಿರುದ್ಧ ಒಂದಾಗೋಣ

ನ್ಯಾ.ರಾಜೇಶ್ ಎನ್.ಹೊಸಮನೆ ಸಲಹೆ

​ಪ್ರಜಾವಾಣಿ ವಾರ್ತೆ
Published 12 ಜೂನ್ 2025, 16:17 IST
Last Updated 12 ಜೂನ್ 2025, 16:17 IST
ಬಳ್ಳಾರಿ ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಗುರುವಾರ ಏರ್ಪಡಿಸಿದ್ದ ‘ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ’ಯಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ರಾಜೇಶ್ ಎನ್.ಹೊಸಮನೆ ಮಾತನಾಡಿದರು
ಬಳ್ಳಾರಿ ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಗುರುವಾರ ಏರ್ಪಡಿಸಿದ್ದ ‘ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ’ಯಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ರಾಜೇಶ್ ಎನ್.ಹೊಸಮನೆ ಮಾತನಾಡಿದರು   

ಬಳ್ಳಾರಿ: ‘ಬಾಲಕಾರ್ಮಿಕ ಪದ್ಧತಿಯನ್ನು ಸಂಪೂರ್ಣವಾಗಿ ತೊಡೆದು ಹಾಕಲು ಅಧಿಕಾರಿಗಳು, ಪೋಷಕರು ಹಾಗೂ ಇತರೆ ಸಂಘ-ಸಂಸ್ಥೆಗಳು ಒಗ್ಗೂಡಬೇಕಿದೆ’ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ರಾಜೇಶ್ ಎನ್.ಹೊಸಮನೆ ಹೇಳಿದರು.

ವಿವಿಧ ಇಲಾಖೆಗಳು ಮತ್ತು ಇತರೆ ಸಂಘ-ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಗುರುವಾರ ಏರ್ಪಡಿಸಿದ್ದ ‘ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ’ಯಲ್ಲಿ ಅವರು ಮಾತನಾಡಿದರು.

‘ದೇಶದಲ್ಲಿ ಬಾಲಕಾರ್ಮಿಕ ಪದ್ಧತಿ ನಿಷೇಧಿಸಲಾಗಿದ್ದು, ಇಂದಿಗೂ ಬಡತನವೆನ್ನುವುದು ಅನೇಕ ಮಕ್ಕಳನ್ನು ದುಡಿಯುವಂತೆ ಮಾಡುತ್ತಿದೆ. ಬಡತನ, ಪೋಷಕರ ನಿರ್ಲಕ್ಷ್ಯದಿಂದ ವಿಶ್ವದಾದ್ಯಂತ 16 ಕೋಟಿ ಮಕ್ಕಳು ಬಾಲ ಕಾರ್ಮಿಕರಾಗಿ ದುಡಿಯುತ್ತಲೇ ಇದ್ದಾರೆ. ಈ ಅನಿಷ್ಠ ಪದ್ಧತಿಯನ್ನು ಹೋಗಲಾಡಿಸಲು ಮಕ್ಕಳಿಗೆ ಶಿಕ್ಷಣ ನೀಡಬೇಕು’ ಎಂದು ತಿಳಿಸಿದರು.

ADVERTISEMENT

ಹೆಚ್ಚುವರಿ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್ ಮಾತನಾಡಿ, ‘ಮಕ್ಕಳು ಬಾಲಕಾರ್ಮಿಕ ಪದ್ಧತಿಯಲ್ಲಿ ತೊಡಗಿಸಿಕೊಂಡು ಶಿಕ್ಷಣದಿಂದ ವಂಚಿತರಾಗಿದ್ದಲ್ಲಿ ಕಾರ್ಮಿಕ, ಪೊಲೀಸ್ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು’ ಎಂದು ಹೇಳಿದರು.

ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ನವೀನ್ ಕುಮಾರ್ ಅವರು ಮಾತನಾಡಿ, ‘ಹದಿನಾಲ್ಕು ವರ್ಷದೊಳಗಿನ ಮಕ್ಕಳನ್ನು ದುಡಿಸಿಕೊಳ್ಳುವುದು ಕಾನೂನು ಬಾಹಿರ. ಅಂಥವರು ಕಂಡು ಬಂದರೆ ಸಹಾಯವಾಣಿ ಸಂಖ್ಯೆ 1098 ಅಥವಾ 112 ಗೆ ಕರೆ ಮಾಡಿ ಮಾಹಿತಿ ನೀಡಬಹುದು’ ಎಂದು ಹೇಳಿದರು.

ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ವಿಜಯಲಕ್ಷ್ಮೀ ಮೈದೂರು, ಬಳ್ಳಾರಿ ಉಪ ವಿಭಾಗ ಕಾರ್ಮಿಕ ಅಧಿಕಾರಿ ಸಿದ್ದಪ್ಪ ಜಿ. ಖೈನೂರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ವಿಜಯ್ ಕುಮಾರ್, ಅಧಿಕಾರಿ ರಾಮಕೃಷ್ಣ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಎಳೆನಾಗಪ್ಪ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಪಿ.ರಾಮಬ್ರಹ್ಮಂ, ಎ.ಮೌನೇಶ್, ಪರಶುರಾಮ್, ರಮೇಶ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.