ADVERTISEMENT

ಹೂವಿನಹಡಗಲಿ: ‘ದುಡಿಯೋಣ ಬಾ’ ಅಭಿಯಾನಕ್ಕೆ ಚಾಲನೆ

​ಪ್ರಜಾವಾಣಿ ವಾರ್ತೆ
Published 6 ಮೇ 2025, 15:49 IST
Last Updated 6 ಮೇ 2025, 15:49 IST
ಹೂವಿನಹಡಗಲಿ ತಾಲ್ಲೂಕು ಸೋವೇನಹಳ್ಳಿಯಲ್ಲಿ ಆಯೋಜಿಸಿದ್ದ ‘ದುಡಿಯೋಣ ಬಾ’ ಅಭಿಯಾನದಲ್ಲಿ ತಾ.ಪಂ. ಇಒ ಎಂ.ಉಮೇಶ್ ಮಾತನಾಡಿದರು.
ಹೂವಿನಹಡಗಲಿ ತಾಲ್ಲೂಕು ಸೋವೇನಹಳ್ಳಿಯಲ್ಲಿ ಆಯೋಜಿಸಿದ್ದ ‘ದುಡಿಯೋಣ ಬಾ’ ಅಭಿಯಾನದಲ್ಲಿ ತಾ.ಪಂ. ಇಒ ಎಂ.ಉಮೇಶ್ ಮಾತನಾಡಿದರು.   

ಹೂವಿನಹಡಗಲಿ: ತಾಲ್ಲೂಕಿನ ಸೋವೇನಹಳ್ಳಿಯಲ್ಲಿ ನರೇಗಾ ಯೋಜನೆಯ ಕೆರೆ ಹೂಳೆತ್ತುವ ಕಾಮಗಾರಿ ಸ್ಥಳದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ‘ದುಡಿಯೋಣ ಬಾ’ ಅಭಿಯಾನ ಹಾಗೂ ಕಾರ್ಮಿಕರ ಆರೋಗ್ಯ ತಪಾಸಣೆ ಕಾರ್ಯಕ್ರಮಕ್ಕೆ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಎಂ. ಉಮೇಶ್ ಚಾಲನೆ ನೀಡಿದರು.

‘ನರೆಗಾ ಸಿಬ್ಬಂದಿ ಮನೆ ಮನೆಗೆ ಭೇಟಿ ನೀಡಿ ಕೂಲಿಕಾರರಿಂದ ಕೆಲಸಕ್ಕೆ ಬೇಡಿಕೆ ಪಡೆಯಲಿದ್ದಾರೆ. ಉದ್ಯೋಗ ಚೀಟಿ ಇಲ್ಲದವರು ಹೊಸದಾಗಿ ಪಡೆಯಬಹುದಾಗಿದೆ.18 ವರ್ಷ ಮೇಲ್ಪಟ್ಟವರು ಉದ್ಯೋಗ ಚೀಟಿಯಲ್ಲಿ ಹೆಸರು ಸೇರ್ಪಡೆ ಮಾಡಬಹುದಾಗಿದೆ. 100 ದಿನಗಳ ನಿರಂತರ ಉದ್ಯೋಗ ನೀಡುತ್ತಿದ್ದು, ಕಾರ್ಮಿಕರು ಸದುಪಯೋಗಪಡಿಸಿಕೊಳ್ಳಬೇಕು’ ಎಂದು ಇಒ ಹೇಳಿದರು.

ನರೇಗಾ ಸಹಾಯಕ ನಿರ್ದೇಶಕ ಡಿ.ವೀರಣ್ಣನಾಯ್ಕ ಬೇಸಿಗೆಯಲ್ಲಿ ಕೂಲಿಕಾರರು ತಮ್ಮ ಆರೋಗ್ಯದ ಕಡೆ ಗಮನಹರಿಸುವುದು ಅವಶ್ಯವಿದ್ದು, ಕಾಮಗಾರಿಯ ಸ್ಥಳದಲ್ಲೇ ಆರೋಗ್ಯ ತಪಾಸಣಾ ಹಮ್ಮಿಕೊಳ್ಳಲಾಗಿದೆ. ಸಣ್ಣ ಪುಟ್ಟ ಕಾಯಿಲೆಗಳನ್ನು ನಿರ್ಲಕ್ಷಿಸದೇ ತಪಾಸಣೆಗೆ ಒಳಗಾಗಿ ಚಿಕಿತ್ಸೆ ಪಡೆಯಬೇಕು ಎಂದು ತಿಳಿಸಿದರು.

ಗ್ರಾ.ಪಂ. ಅಧ್ಯಕ್ಷೆ ಪಾಲಕ್ಷ ಬಾಯಿ ಅಧ್ಯಕ್ಷತೆ ವಹಿಸಿದ್ದರು. ಪಿಡಿಒ ಪ್ರಕಾಶ್ ಪೂಜಾರ್, ನರೇಗಾ ತಾಂತ್ರಿಕ ಸಿಬ್ಬಂದಿ ರವಿಕುಮಾರ್, ಪ್ರಕಾಶ್ ನಾಯ್ಕ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.