
ಹೊಸಪೇಟೆ(ವಿಜಯನಗರ): ಪರವಾನಗಿ ಭೂ ಮಾಪಕರು ಭೂ ಮಾಪಕ ವೃತ್ತಿಯನ್ನು ಕಾಯಂಗೊಳಿಸುವಂತೆ ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಭೂ ದಾಖಲೆಗಳ ಉಪನಿರ್ದೇಶಕರಿಗೆ ಶುಕ್ರವಾರ ಮನವಿ ಸಲ್ಲಿಸಿದರು.
ಅಖಿಲ ಕರ್ನಾಟಕ ಸರ್ಕಾರಿ ಪರವಾನಗಿ ಭೂ ಮಾಪಕರ ಸಂಘ(ರಿ ) ಬೆಂಗಳೂರು ಹಾಗೂ ವಿಜಯನಗರ ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ಪರವಾನಗಿ ಭೂ ಮಾಪಕರು ಹಮ್ಮಿಕೊಂಡಿರುವ ಅನಿರ್ದಿಷ್ಟವಾದಿ ಮುಷ್ಕರಕ್ಕೆ ಕರೆ ನೀಡಿದಂತೆ ಶುಕ್ರವಾರ ಜಿಲ್ಲೆಯ ಎಲ್ಲಾ ಪರವಾನಗಿ ಭೂ ಮಾಪಕರು ಇಲಾಖೆಯಲ್ಲಿ ಸುಮಾರು 24 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಪರವಾನಾಗಿ ಭೂ ಮಾಪಕ ವೃತ್ತಿ ಯನ್ನು ಕಾಯಂ ಹಾಗೂ ವಿವಿಧ ಬೇಡಿಕೆಗಳು ಈಡೇರುವವರೆಗೂ ಇಲಾಖೆಯ ಎಲ್ಲ ಕೆಲಸಗಳನ್ನು ಸ್ಥಗಿತಗೊಳಿಸಿ ಅನಿರ್ದಿಷ್ಟವದಿ ಮುಷ್ಕರ ಹಮ್ಮಿಕೊಂಡಿದ್ದಾರೆ.
ಕಾಯಂ ಹುದ್ದೆ ಹಾಗೂ ಸೇವಾ ಭದ್ರತೆ ನೀಡಬೇಕು ಹಾಗೂ ಸಮಾನ ಕೆಲಸಕ್ಕೆ ಸಮಾನ ವೇತನ, ಅರೋಗ್ಯ ಮತ್ತು ಜೀವ ವಿಮೆ ಸೇರಿದಂತೆ ಇತರೆ ಬೇಡಿಕೆಗಳನ್ನು ಈಡೇರಿಸುವವರೆಗೂ ಮುಷ್ಕರವನ್ನು ಹಿಂಪಡೆಯುವುದಿಲ್ಲವೆಂದು ಜಿಲ್ಲೆಯ ಎಲ್ಲ ಪರವಾನಗಿ ಭೂ ಮಾಪಕರ ಪರವಾಗಿ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಮಹಾಲಿಂಗಪ್ಪ ಹೇಳಿದರು.
ಭೂ ಮಾಪಕರ ಸಂಘದ ಜಿಲ್ಲಾ ಘಟಕದ ಪದಾಧಿಕಾರಿಗಳು, ತಾಲ್ಲೂಕು ಘಟಕದ ಅಧ್ಯಕ್ಷರು ಮತ್ತು ಭೂ ಮಾಪಕರು ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.