ಬಳ್ಳಾರಿ: ಮದ್ಯ ಸೇವನೆಗೆ ಹಣ ಕೊಡದ ಪತ್ನಿಯನ್ನು ಕೊಲೆ ಮಾಡಿದ್ದ ವ್ಯಕ್ತಿಗೆ ಬಳ್ಳಾರಿಯ ಜಿಲ್ಲಾ ಸತ್ರ ನ್ಯಾಯಾಲಯದ ನ್ಯಾಯಾಧೀಶ ಬಿ.ಜಿ ಪ್ರಮೋದ್ ಅವರು ಜೀವಾವಧಿ ಶಿಕ್ಷೆ ಮತ್ತು ₹10 ಸಾವಿರ ದಂಡ ವಿಧಿಸಿ ಬುಧವಾರ ತೀರ್ಪು ನೀಡಿದ್ದಾರೆ.
ಕುಡಿತಕ್ಕೆ ಹಣ ನೀಡಲು ನಿರಾಕರಿಸಿದ್ದ ಪತ್ನಿ ರಂಗಮ್ಮಳ ಶೀಲ ಶಂಕಿಸಿದ್ದ ಜಡೆಪ್ಪ, 2022ರ ಜುಲೈ 5ರಂದು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ್ದ. ಮೋಕ ಪೊಲೀಸ್ ಠಾಣೆ ವ್ಯಾಪ್ತಿಯ ತಿಮ್ಮಪ್ಪನ ಗುಡಿಯ ಬಳಿ ಈ ಘಟನೆ ನಡೆದಿತ್ತು.
ದಂಡ ಪಾವತಿಸಲು ವಿಫಲರಾದರೆ ಜೀವಾವಧಿ ಶಿಕ್ಷೆಯ ಜೊತೆಗೆ ಎರಡು ವರ್ಷಗಳ ಸಾದಾ ಸಜೆ ಎದುರಿಸಬೇಕು ಎಂದೂ ತೀರ್ಪಿನಲ್ಲಿ ಹೇಳಲಾಗಿದೆ. ಸರ್ಕಾರದ ಪರ ಸರ್ಕಾರಿ ಅಭಿಯೋಜಕಿ ಲಕ್ಷ್ಮಿದೇವಿ ಪಾಟೀಲ್ ವಾದ ಮಂಡಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.