
ಕೂಡ್ಲಿಗಿ: ‘ಮಾನಸಿಕ ಆರೋಗ್ಯ ಎಂಬುದು ಇತ್ತೀಚಿನ ದಿನಗಳಲ್ಲಿ ಯುವಕರಿಗೆ ತುಂಬಾ ಅವಶ್ಯಕವಾಗಿದೆ’ ಎಂದು ಜಿಲ್ಲಾ ಮಿದುಳು ಕಾರ್ಯಕ್ರಮದ ಸಂಯೋಜಕ ಡಾ. ಗಿರೀಶ್ ಹೇಳಿದರು.
ಪಟ್ಟಣದ ಶ್ರೀಮತಿ ಅಂಗಡಿ ವೀರಮ್ಮ ತಿರುಕಪ್ಪ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರೂಟ್ಸ್ ಸಂಸ್ಥೆಯಿಂದ ಬುಧುವಾರ ಹಮ್ಮಿಕೊಂಡಿದ್ದ ಮಾನಸಿಕ ಆರೋಗ್ಯ ಮತ್ತು ಒತ್ತಡ ನಿರ್ವಹಣೆ ಕುರಿತಿ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
‘ಮೊಬೈಲ್ ಹೆಚ್ಚು ಬಳಕೆಯಿಂದ ವಿದ್ಯಾರ್ಥಿಗಳು ಖಿನ್ನತೆ ಕಾಯಿಲೆಗೆ ಒಳಗಾಗುತ್ತಿದ್ದು, ಓದಿನಲ್ಲಿ ಆಸಕ್ತಿ ಕಳೆದುಕೊಳ್ಳುತ್ತಿದ್ದಾರೆ. ಮೊಬೈಲ್ ಬಳಕೆ ಮಿತವಾಗಿರುವಂತೆ ನೋಡಿಕೊಳ್ಳಬೇಕು’ ಎಂದು ಸಲಹೆ ನೀಡಿದರು.
ಜಿಲ್ಲಾ ಮನೋವೈದ್ಯಕೀಯ ಸಾಮಾಜಿಕ ಕಾರ್ಯಕರ್ತ ಮಾರೇಶ್ ಮಾತನಾಡಿ, ‘ಚಿಕ್ಕ ವಿಷಯಗಳಿಗೆ ಕೋಪಿಸಿಕೊಂಡು ಖಿನ್ನತಗೆ ಒಳಗಾಗುವವರ ಸಂಖ್ಯೆಯಲ್ಲಿ ವಿದ್ಯಾರ್ಥಿಗಳೇ ಹೆಚ್ಚಾಗಿದ್ದಾರೆ. ಯಾವುದೇ ಒತ್ತಡಗಳಿಗೆ ಒಳಗಾಗಬಾರದು. ಪ್ರತಿ ಮೂರನೇ ಶನಿವಾರ ಕೂಡ್ಲಿಗಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಮಾನಸಿಕವಾಗಿ ದುರ್ಬಲರಾದ ವ್ಯಕ್ತಿಗಳಿಗೆ ಆಪ್ತ ಸಮಾಲೋಚನೆ ನಡೆಸಲಾಗುತ್ತಿದ್ದು, ಇದರ ಪ್ರಯೋಜನ ಪಡೆಯಬೇಕ’ ಎಂದು ತಿಳಿಸಿದರು.
ತಾಲ್ಲೂಕು ಹಿರಿಯ ಆರೋಗ್ಯ ಶಿಕ್ಷಣಾಧಿಕಾರಿ ಜಗದೀಶ್ ಮಾತನಾಡಿದರು. ಪ್ರಾಚಾರ್ಯ ಷಣ್ಮುಖನಗೌಡ ಅಧ್ಯಕ್ಷತೆ ವಹಿಸಿದ್ದರು.
ಸಹಾಯಕ ಪ್ರಾಧ್ಯಾಪಕ ತಾತಪ್ಪ, ರೂಟ್ಸ್ ಸಂಸ್ಥೆಯ ಕಾರ್ಯದರ್ಶಿ ಡಾ. ಪಂಪಾಪತಿ, ಆರ್‌ಬಿಎಸ್‌ಕೆ ಓಬಣ್ಣ, ರೂಟ್ಸ್ ಸಂಸ್ಥೆಯ ಯುಗಚಂದ್ರ ಎಂ. ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.