ADVERTISEMENT

ಮೈಲಾರದಲ್ಲಿ ಪೊಲೀಸರ ದಾಳಿ : ಅಕ್ರಮ ಮದ್ಯವಶ

​ಪ್ರಜಾವಾಣಿ ವಾರ್ತೆ
Published 27 ಜನವರಿ 2021, 3:40 IST
Last Updated 27 ಜನವರಿ 2021, 3:40 IST
ಹೂವಿನಹಡಗಲಿ ತಾಲ್ಲೂಕು ಮೈಲಾರದಲ್ಲಿ ಸಿಪಿಐ ರಾಮರೆಡ್ಡಿ ನೇತೃತ್ವದಲ್ಲಿ ಪೊಲೀಸರು ದಾಳಿ ನಡೆಸಿ ಅಕ್ರಮ ಮದ್ಯ ವಶಪಡಿಸಿಕೊಂಡರು
ಹೂವಿನಹಡಗಲಿ ತಾಲ್ಲೂಕು ಮೈಲಾರದಲ್ಲಿ ಸಿಪಿಐ ರಾಮರೆಡ್ಡಿ ನೇತೃತ್ವದಲ್ಲಿ ಪೊಲೀಸರು ದಾಳಿ ನಡೆಸಿ ಅಕ್ರಮ ಮದ್ಯ ವಶಪಡಿಸಿಕೊಂಡರು   

ಹೂವಿನಹಡಗಲಿ: ತಾಲ್ಲೂಕಿನ ಮೈಲಾರ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ ಸ್ಥಳಗಳ ಮೇಲೆ ಪೊಲೀಸರು ಮಂಗಳವಾರ ದಾಳಿ ನಡೆಸಿ ₹ 89,000 ಮೌಲ್ಯದ 18 ಲೀಟರ್ ಅಕ್ರಮ ಮದ್ಯ, ₹ 3,010 ನಗದು ವಶಪಡಿಸಿಕೊಂಡಿದ್ದಾರೆ.

ಮೈಲಾರದಲ್ಲಿ ಅಕ್ರಮ ಮದ್ಯದ ಹಾವಳಿ ತಡೆಗಟ್ಟಿ ಸುಕ್ಷೇತ್ರದ ಪಾವಿತ್ರ್ಯತೆ ಕಾಪಾಡುವಂತೆ ಗ್ರಾಮದ ಮಹಿಳೆಯರು, ರೈತ ಸಂಘದ ಮುಖಂಡರು ಸೋಮವಾರ ತಹಶೀಲ್ದಾರ್‌ಗೆ ಮನವಿ ಮಾಡಿದ್ದರು.

ಸಿಪಿಐ ಕೆ.ರಾಮರೆಡ್ಡಿ ನೇತೃತ್ವದ ಪೊಲೀಸ್ ತಂಡ ಮೈಲಾರ ಗ್ರಾಮದ ಮೂರು ಕಡೆಗಳಲ್ಲಿ ದಾಳಿ ನಡೆಸಿ ಅಕ್ರಮ ಮದ್ಯ ವಶಪಡಿಸಿಕೊಂಡಿದೆ. ಅಕ್ರಮದಲ್ಲಿ ತೊಡಗಿದ್ದ ಆರೋಪಿಗಳಾದ ಹೊಳಲು ಗ್ರಾಮದ ಸೊಪ್ಪಿನ ಪ್ರಕಾಶ, ಮೈಲಾರದ ತೇಜಪ್ಪನವರ ಮಾರುತಿ, ಜಜ್ಜೂರಿ ಪುಟ್ಟಪ್ಪ, ಮಡಿವಾಳರ ಬಸಪ್ಪರನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ. ದಾಳಿಯಲ್ಲಿ ಮುಖ್ಯಪೇದೆ ಕೆ.ನಾಗರಾಜ, ಶ್ರೀಶೈಲ ಮತ್ತು ಶಿವಪ್ಪ ಇದ್ದರು. ಈ ಕುರಿತು ಹಿರೇಹಡಗಲಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.