ಬಳ್ಳಾರಿ: ‘ಬಾಕಿ ವ್ಯಾಜ್ಯಗಳನ್ನು ರಾಜಿ ಸಂಧಾನ ಮೂಲಕ ಇತ್ಯರ್ಥ ಮಾಡಿಕೊಳ್ಳಲು ಲೋಕ ಅದಾಲತ್ ಸುವರ್ಣವಕಾಶ’ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಧೀಶೆ ಕೆ.ಜಿ. ಶಾಂತಿ ಹೇಳಿದರು.
ನಗರದ ತಾಳೂರು ರಸ್ತೆಯಲ್ಲಿರುವ ನ್ಯಾಯಾಲಯದ ಸಭಾಂಗಣದಲ್ಲಿ ರಾಷ್ಟ್ರೀಯ ಲೋಕ ಅದಾಲತ್ ಕುರಿತು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.
‘ಲೋಕಾ ಅದಾಲತ್‌ನಲ್ಲಿ ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆ ಸೇರಿದಂತೆ 31 ನ್ಯಾಯಾಲಯಗಳಲ್ಲಿ ಬಾಕಿ ಇರುವ 64,811 ಪ್ರಕರಣಗಳ ಪೈಕಿ 12,438 ಪ್ರಕರಣಗಳನ್ನು ಬಗೆಹರಿಸಹುದೆಂದು ಗುರುತಿಸಲಾಗಿತ್ತು. ಅವುಗಳಲ್ಲಿ ಕೆಲವನ್ನು ನ್ಯಾಯಾಧೀಶರು ಮತ್ತು ವಕೀಲರ ಸಮ್ಮುಖದಲ್ಲಿ ನ್ಯಾಯಾಲಯದ ಅಧಿಕಾರಿಗಳು ಮತ್ತು ಸಂಧಾನಕಾರರು ಕಕ್ಷಿದಾರರ ಮನವೊಲಿಸಿ ಇತ್ಯರ್ಥಗೊಳಿಸಿದ್ದಾರೆ’ ಎಂದರು.
‘ವ್ಯಾಜ್ಯ ಪೂರ್ವ ಪ್ರಕರಣಗಳನ್ನು ರಾಜಿಗೆ ತೆಗೆದುಕೊಂಡಿದ್ದು, ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ದೊರೆತಿದೆ’ ಎಂದು ಹೇಳಿದರು.
ವ್ಯಾಜ್ಯಯ ವಿಚಾರಣೆ ನಡೆಯುವ ಕೊಠಡಿಗಳಿಗೆ ಭೇಟಿ ನೀಡಿ, ಪರಿಶೀಲಿಸಿದರು. ಹಿರಿಯ ಸಿವಿಲ್ ನ್ಯಾಯಾಧೀಶ ರಾಜೇಶ್ ಎನ್.ಹೊಸಮನೆ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.